ಚಾಮರಾಜನಗರ: ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಭಿಮಾನಿ ಬಳಗದ ವತಿಯಿಂದ ಸನ್ಮಾನಿಸಲಾಯಿತು.
ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷರು, ಚಾಮರಾಜನಗರ ತಾಲೂಕು ಕುರುಬರ ಸಂಘದ ಗೌರವ ಅಧ್ಯಕ್ಷ ಬೆಳ್ಳೇಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ಗುಲಾಬಿ ಹೂವಿನಹಾರ, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕುರಬರ ಸಂಘದ ಅಧ್ಯಕ್ಷ ಉಮೇಶ್ ಎಸ್ ಪಿಕೆ, ಸಿದ್ದರಾಮಯ್ಯ ಅಭಿಮಾನಿಗಳು ಬಳಗದ ಜಿಲ್ಲಾ ಉಪಾಧ್ಯಕ್ಷ
ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಕುದೇರು, ಲಿಂಗಣ್ಣ, ರಾಚಪ್ಪ, ತಮ್ಮಡಹಳ್ಳಿಗೌಡ, ಮಾದಾಪುರ ಗುರುಸ್ವಾಮಿ, ಮಹಾದೇವಸ್ವಾಮಿ ಇತರರು ಹಾಜರಿದ್ದರು.