ತಾಲೂಕು ಕುರುಬರ ಸಂಘದಿಂದ ಸಿಎಂಗೆ ಸನ್ಮಾನ

ಚಾಮರಾಜನಗರ:   ತಾಲೂಕು ಕುರುಬರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ 110 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕಾಗಿ ತಾತ್ಕಾಲಿಕ ಹೆಲಿಪ್ಯಾಡ್ ಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ತಾಲೂಕು ಕುರುಬರ ಸಂಘದ ತಾಲೂಕು ಅಧ್ಯಕ್ಷ ಉಮೇಶ್ ಎಸ್ ಪಿಕೆ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಸದಸ್ಯರಾದ ಮಹೇಶ್, ಕುದೇರು ಲಿಂಗಣ್ಣ, ಬೆಳ್ಳೇಗೌಡ, ಮಂಜು ನಗರಸಭಾ ಮಾಜಿ ಉಪಾಧ್ಯಕ್ಷ ರಾಚಪ್ಪ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *