ಚಾಮರಾಜನಗರ: ಹನೂರು ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿದ್ದ 490 ಕೋಟಿ ವೆಚ್ಚದ ಉಡುತೊರೆಹಳ್ಳ ಜಲಾಶಯ ಏತ ನೀರಾವರಿ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು ಹನೂರು ಭಾಗದ ರೈತರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ಖಾಯಂ ಆಹ್ವಾನಿತರಾದ ಹೆಗ್ಗವಾಡಿಪುರ ಮಹೇಶ್ ಕುಮಾರ್ ಅಭಿನಂದನೆ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ.. ಸಿದ್ದರಾಮಯ್ಯನವರು ವಿಶ್ವರೈತನಾಯಕರಾದ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳೆದಿದ್ದ ಹಿನ್ನಲೆಯಲ್ಲಿ ಹನೂರು ಭಾಗದ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 491 ಕೋಟಿ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಹನೂರು ಅಜ್ಜಿಪುರದಿಂದ ವಿಧಾನಸೌಧದವರಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರೈತರ ಮನವಿ ಮುಖ್ಯಮಂತ್ರಿಗಳಿ ಸ್ಪಂದಿಸಿರುವುದಕ್ಕೆ ಅವರಿಗೆ ಈ ಮೂಲಕ ಹೃಯದಪೂರ್ವಕ ಅಭಿನಂದನೆ ಸಲ್ಲಿಸಲಾಗುವುದು ಎಂದರು.