ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಲೆ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. 

ಮುಖ್ಯಮಂತ್ರಿಗಳು ದೇವಲಯಕ್ಕೆ ಆಗಮಿಸುತ್ತಿದ್ದಂತೆ ಮಂಗಳವಾದ್ಯ, ನಾದಸ್ವರದ ಮೂಲಕ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು. 

ಮುಖ್ಯಮಂತ್ರಿಗಳು ದೇವಾಲಯ ಪ್ರವೇಶಿಸಿ ಒಂದು ಸುತ್ತು ಪ್ರದಕ್ಷಿಣೆ ಹಾಕಿದರು. ಬಳಿಕ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು. ಬಳಿಕ ಬೆಳ್ಳಿ ರಥಕ್ಕೆ ನಮಿಸಿ ಸೇವೆ ಸಲ್ಲಿಸಿದರು. 

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಶಾಸಕರಾದ ಎಂ.ಆರ್. ಮಂಜುನಾಥ್, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಡಾ. ಡಿ. ತಿಮ್ಮಯ್ಯ, ಸಾಲೂರು ಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಇತರೆ ಗಣ್ಯರು ಇದ್ದರು.

Leave a Reply

Your email address will not be published. Required fields are marked *