ಹೆಚ್.ಸಿ.ಮಹದೇವಪ್ಪ ವಿರುದ್ದ ಅವಹೇಳನಕಾರಿ ಕಿಡಿಗೇಡಿಗಳ ಮೇಲೆ ಕ್ರಮಕೈಗೊಳ್ಳಲು ಎಸ್ಪಿಗೆ ದೂರು

ಚಾಮರಾಜನಗರ:  ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ  ಮಾದಿಗ ಸಮುದಾಯ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್.ಸಿ.ಮಹದೇವಪ್ಪ ವಿರುದ್ದ ಅವಹೇಳನಕಾರಿ ಹೇಳಿಕೆ,  ಅವರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿರುವ ಕಿಡಿಗೇಡಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು  ಛಲವಾದಿ ಮಹಾಸಭಾದ ಜಿಲ್ಲಾ ಘಟಕ ನಗರದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಅವರಿಗೆ  ದೂರು ಸಲ್ಲಿಸಿದೆ.
ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎನ್. ಕುಮಾರ್ ಅವರ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಕೆ.ಆರ್.ನಾರಾಯಣ್, ಎಲ್.ಮಹದೇವಯ್ಯ ಕೋಡಿಉಗನೆ, ದುಂಡಯ್ಯಜ್ಯೋತಿಗೌಡನಪುರ, ಅಶೋಕ, ಪರಮೇಶ,ಚಿದಾನಂದಮೂರ್ತಿ, ನಂದೀಶ್, ಸಿದ್ಧಾರ್ಥ, ಕಿರಣ್, ಇತರರು ಹಾಜರಿದ್ದರು.

Leave a Reply

Your email address will not be published. Required fields are marked *