ಚಾಮರಾಜನಗರ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿದ್ದು, ಸಮೀಕ್ಷೆಯನ್ನು ನಿಗಧಿತ ಸಮಯಕ್ಕೆ ಪೂರ್ಣ ಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ, ಮುಳ್ಳೂರು ಮತ್ತು ಹರಳೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಂದು ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಖುದ್ದು ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯತಿಗಳಿಗೆ ಭೇಟಿಕೊಟ್ಟು ಸಮೀಕ್ಷಾ ಕೆಲಸವನ್ನು ವೀಕ್ಷಣೆ ಮಾಡಿದರು.
ಸಮೀಕ್ಷಕರು ಅವರಿಗೆ ನಿಗದಿ ಪಡಿಸಿರು ಗುರಿಯನ್ನು ಸಾಧಿಸಬೇಕು. ಒಂದು ವೇಳೆ ತಾಂತ್ರಿಕ ದೋಷಗಳು ಕಂಡು ಬಂದರೆ ತಾಂತ್ರಿಕ ಸಮಾಲೋಚಕರನ್ನು ಸಂಪರ್ಕಿಸಬೇಕು ಎಂದು ಹೇಳಿದರು.
ಸಾರ್ವಜನಿಕರಿಂದ ಪ್ರಶ್ನಾವಳಿ ಮೂಲಕ ಸಮರ್ಪಕವಾಗಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಸೂಚಿಸಿದರು.ಇದೇ ವೇಳೆ ಸ್ವ ಸಹಾಯ ಸಂಘದ ಮಹಿಳೆಯರು ಸಮೀಕ್ಷೆಯ ಬಗ್ಗೆ ಅರಿವು ಮೂಡಿಸುತ್ತಿದ್ದ ಕಾರ್ಯವನ್ನು ಸಹ ಸಿಇಒ ಅವರು ವೀಕ್ಷಿಸಿದರು.
ತದ ನಂತರ ಗ್ರಾಮ ಪಂಚಾಯ್ತಿಯ ದಿನ ನಿತ್ಯದ ಕಾರ್ಯವೈಖರಿ ಪರಿಶೀಲಿಸಿದರು.
ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಕಸ ಸಂಗ್ರಹಣೆಯನ್ನು ಸರಿಯಾದ ಕ್ರಮದಲ್ಲಿ ನಿರ್ವಹಣೆ ಮಾಡುವಂತೆ ಮತ್ತು ಎನ್.ಆರ್.ಎಲ್.ಎಂ ಸಂಘದ ಮಹಿಳೆಯರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡುವಂತೆ ತಿಳಿಸಿದರು.
ಮುಳ್ಳೂರು ಗ್ರಾಮ ಪಂಚಾಯತಿಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಸರಿಯಾದ ಸಮಯಕ್ಕೆ ನೀರು ಬರುತ್ತದಿಯೇ? ಎಂದು ಪರಿಶೀಲಿಸಿದರು.
ಈ ಸಂಧರ್ಭದಲ್ಲಿ ಸಹಾಯಕ ನಿರ್ದೇಶಕರು (ಗ್ರಾ&ಉ) ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಎಸ್.ಬಿ.ಎಂ ಸಮಾಲೋಚಕರು ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿ ಹಾಜರಿದ್ದರು