ಮತದಾರರ ಪಟ್ಟಿ ಪರಿಷ್ಕರಣೆ : ಆಗಸ್ಟ್ 17 ರವರೆಗೂ ಬಿಎಲ್‍ಒಗಳಿಂದ ಮನೆಮನೆಗೆ ಭೇಟಿ

ಚಾಮರಾಜನಗರ,: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‍ಒ) ಮನೆಮನೆಗೆ ಭೇಟಿ ನೀಡುವ ಕಾರ್ಯವು ಆಗಸ್ಟ್ 17 ರವರೆಗೆ ವಿಸ್ತರಣೆಯಾಗಿದೆ.

   ಈ ಹಿಂದಿನ ವೇಳಾಪಟ್ಟಿ ಪ್ರಕಾರ ಬಿಎಲ್‍ಒಗಳು ಜೂನ್ 30 ರಿಂದ ಆಗಸ್ಟ್ 8ರವರೆಗೆ ಮನೆಮನೆಗೆ ಭೇಟಿ ನೀಡಬೇಕಿತ್ತು. ಪರಿಷ್ಕøತ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರವರೆಗೂ ಮನೆಮನೆಗೆ ಬಿಎಲ್‍ಒಗಳು ಭೇಟಿ ನೀಡಲಿದ್ದಾರೆ. ಮತಗಟ್ಟೆಗಳ ಮರು ಸಂಯೋಜನೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 8ಕ್ಕೆ ಅವಧಿ ನಿಗದಿಯಾಗಿದ್ದು, ಪರಿಷ್ಕøತ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ. ಕರಡು ಮತದಾರರ ಪಟ್ಟಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರಂದು ಪ್ರಕಟವಾಗಬೇಕಿತ್ತು. ಪರಿಷ್ಕøತ ವೇಳಾಪಟ್ಟಿ ಪ್ರಕಾರ ಆಗಸ್ಟ್ 24 ರಂದು ಪ್ರಕಟವಾಗಲಿದೆ.

   ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 17ರಿಂದ ಸೆಪ್ಟೆಂಬರ್ 16ರವರೆಗೆ ನಿಗದಿಯಾಗಿದ್ದ ದಿನಾಂಕವನ್ನು ಪರಿಷ್ಕøತ ವೇಳಾಪಟ್ಟಿ ಪ್ರಕಾರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ನಿಗದಿ ಮಾಡಲಾಗಿದೆ. ನೋಟಿಸ್ ಅವಧಿ/ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗಾಗಿ ಈ ಹಿಂದಿನ ವೇಳಾಪಟ್ಟಿ ಪ್ರಕಾರ ಆಗಸ್ಟ್ 17 ರಿಂದ ಅಕ್ಟೋಬರ್ 15ರವರೆಗೆ ಅವಧಿ ನಿಗದಿಯಾಗಿತ್ತು. ಪರಿಷ್ಕøತ ವೇಳಾಪಟ್ಟಿ ಪ್ರಕಾರ ಆಗಸ್ಟ್  24ರಿಂದ ಅಕ್ಟೋಬರ್ 22ರವರೆಗೆ ನಿಗದಿ ಮಾಡಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಈ ಹಿಂದಿನ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 19ಕ್ಕೆ ಪ್ರಕಟಿಸಬೇಕಿತ್ತು. ಪರಿಷ್ಕøತ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *