- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಪಿ.ಮರಿಸ್ವಾಮಿ
ಚಾಮರಾಜನಗರ:ಲೋಕಸಭಾ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಬಿಜೆಪಿ ಸರ್ಕಾರವು ದುರುದ್ದೇಶಪೂರಿತ ಎಫ್ ಐ ಆರ್ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ಅಸ್ಗರ್ ,ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೆಂಗಾಕಿ ನಾಗರತ್ನ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ನಡೆದ ವೇದಿಕೆ ‘ಶುದ್ಧೀಕರಣ’ ವಿವಾದ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಅದರಂತೆ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗಿದೆ. ರಾಹುಲ್ ಅವರ ಮೇಲೆ ಕೇಂದ್ರ ಸರ್ಕಾರ ಎಫ್ ಐ ಆರ್ ಹಾಕಿಸಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ‘ಶುದ್ದೀಕರಣ’ ಮಾಡಿದ ಈ ಕೃತ್ಯವನ್ನು ಖಂಡಿಸಿದ್ದ ರಾಹುಲ್ ಗಾಂಧಿ, ಇದು ದಲಿತರ ಅವಮಾನ ಹಾಗೂ ಅಸ್ಪೃಶ್ಯತೆಯ ಮನಸ್ಥಿತಿ ಎಂದು ಆರೋಪಿಸಿ, ಕೃತ್ಯ ಎಸಗಿದವರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದ ಅವರ ವಿರುದ್ಧವೇ ಎಫ್‌ಐಆರ್ ಹಾಕಿರುವುದು ನಾಚಿಗೇಡಿನ ಸಂಗತಿಯಾಗಿದೆ. ಇದು ನಿಜಕ್ಕೂ ಖಂಡನೀಯವಾದದ್ದು,. ಅನ್ಯಾಯ ಮಾಡಿದವರ ಮೇಲೆ ಕೇಸ್ ಹಾಕುವ ಬದಲು ನ್ಯಾಯ ಕೇಳಲು ಹೋದವರ ಮೇಲೆ ಎಫ್‌ಐಆರ್ ಹಾಕಿದ್ದಾರೆ. ಇದು ಗೂಂಡಾ ಸರ್ಕಾರ ಪ್ರವೃತ್ತಿಯಾಗಿದೆ. ಇಂತಹ ಗೂಂಡಾ ನೀತಿ ಕೇಂದ್ರ ಸರ್ಕಾರ ತೊಲಗಬೇಕು ಎಂದು ಕಿಡಿಕಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳ ಶುದ್ಧೀಕರಿಸಿದ್ದವರಿಗೆ ಶಿಕ್ಷಿಸಬೇಕು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿದೆ ಇದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೇಲೆ ನಡೆದಿರುವ ಗಂಭೀರ ದಾಳಿ. ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದ ನಾಯಕರನ್ನೇ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಬಿಜೆಪಿ ಸರ್ಕಾರ ತನ್ನ ನಿಜವಾದ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಉತ್ತರಾಖಂಡ ಸರ್ಕಾರ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಚೂಡ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ, ನಗರಸಭಾ ನಾಮ ನಿರ್ದೇಶಕ ಸ್ವಾಮಿ, ಕಸಬಾ ಪಿಎಸಿಸಿ ಅಧ್ಯಕ್ಷ ಮಹೇಶ್ ಕುದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕುಮಾರ್‌ಮರಿಯಾಲದಹುಂಡಿ, ರಮೇಶ್, ಅಕ್ಷಯ್ ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ, ,ನವೀನ್, ಕುಮಾರ್‌ಮಾದಪುರ, ಜಿಪಂ ಕೆಡಿಪಿ ಸದಸ್ಯರಾದ ಮುಸಾಹಿಬ್, ಕೆಡಿಪಿ ಸದಸ್ಯರಾದ ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ ಗ್ರಾಮಾಂತರ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ನಾಗೇಂದ್ರ, ನಗರಸಭೆ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಸುರೇಶ್‌ನಾಯಕ್, ಯಳಂದೂರು ಹಿಂದುಳಿದ ವರ್ಗಗಳ ಅಧ್ಯಕ್ಷ ಚೇತನ್, ಉಪಾಧ್ಯಕ್ಷ ಸಿದ್ದರಾಜು, ಮಾಧ್ಯಮ ಕಾರ್ಯದರ್ಶಿ ರಾಜೇಶ್ ಗೌಡಹಳ್ಳಿ ಉಲ್ಲಾಸ್, ಗ್ರಾ,ಪಂ ಮಾಜಿ ಅಧ್ಯಕ್ಷ ರೂಪೇಶ್, ಪುಟ್ಟಸ್ವಾಮಿ, ಉಡಿಗಾಲ ನಂಜಪ್ಪ, ರಂಗಸ್ವಾಮಿ, ವೀರಭದ್ರಸ್ವಾಮಿ, ಕಾಗಲವಾಡಿ ಚಂದ್ರು.ಜಿ,ಡಿ,ಪ್ರಕಾಶ್, ಪ್ರಸನ್ನ, ಮನೋಜ್, ಮಧು,ಪ್ರದೀಪ್, ಬಸವಣ್ಣ, ಆನಂತ್, ಅಯಿಭ್‌ಖಾನ್, ಅಪ್ಸರ್ ಅಹಮದ್ ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.
