ಚಾಮರಾಜನಗರ : ರಾಹುಲ್ ಗಾಂಧಿ ಬಂಧನ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ಬಿಜೆಪಿ, ಕೇಂದ್ರ ಮುಖ್ಯ ಚುನಾವಣಾ
ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಸಲ್ಲಿಸಿದರು.
ಎಸ್ಐ ಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ನಾಗರೀಕ ಸಮಾಜದ ಪ್ರತಿನಿಧಿಗಳೊಂದಿಗೆ ಸಮರ್ಪಕ ಸಮಾಲೋಚನೆ ನಡೆಸಬೇಕು, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು, ಮತದಾರರ ಹೆಸರನ್ನು ಕೈಬಿಡುವ ಮೊದಲು ಸಂಬಂಧಪಟ್ಟ ಮತದಾರರಿಗೆ ಸೂಕ್ತ ನೋಟೀಸ್ ನೀಡಿ, ತಮ್ಮ ಹಕ್ಕನ್ನು ಸಮರ್ಥಿಸಿಕೊಳ್ಳಲು ಸಮರ್ಪಕ ಅವಕಾಶ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಬಿಎಲ್ ಓ ,ಇಆರ್ ಒ ಮಟ್ಟದಲ್ಲಿ ನಡೆಯುವ ಪರಿಶೀಲನಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು.ಎಸ್ ಐ ಆರ್
ಯಲ್ಲಿ ಹೆಸರು ಕೈಬಿಡಲಾದ ಅಥವಾ ಸೇರ್ಪಡೆಗೊಳ್ಳದ ಮತದಾರರಿಗೆ ಆಕ್ಷೇಪಣೆ ಹಾಗೂ ಮೇಲ್ಮನವಿ ಸಲ್ಲಿಸಲು ಸುಲಭವಾದ ಅವಕಾಶ ಕಲ್ಪಿಸಬೇಕು.
ಗ್ರಾಮೀಣ ಪ್ರದೇಶಗಳು, ಬಡವರು. ವಲಸೆ ಕಾರ್ಮಿಕರು, ವೃದ್ಧರು ಹಾಗೂ ದಾಖಲೆಗಳನ್ನು ಹೊಂದಿಸುವಲ್ಲಿ ತೊಂದರೆ ಎದುರಿಸಬಹುದಾದ ಅರ್ಹ ನಾಗರೀಕರಿಗೆ ಅಗತ್ಯ ಸಹಾಯ ಮತ್ತು
ಸೂಕ್ತ ಕಾಲಾವಕಾಶ ನೀಡಬೇಕು. ಎಸ್ ಐಆರ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳು ಪ್ರಕ್ರಿಯೆಗಳು ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ
ಮಾಹಿತಿಯನ್ನು ಸ್ಪಷ್ಟವಾಗಿ ಪ್ರಕಟಿಸಬೇಕು, ಅನ್ಯವ್ಯಕ್ತಿಗಳು ಅನ್ ಲೈನ್ ನಲ್ಲಿ
ನೈಜ ಮತದಾರರ ಎಪಿಕ್ ನಂಬರು ನೀಡಿ ದೂರು ಸಲ್ಲಿಸಿದರೆ ಮತದಾನ ಹಕ್ಕು ಡಿಲಿಟ್ ಮಾಡುವ ವ್ಯವಸ್ಥೆ ಹೊಂದಿರುವ ಫಾರಂ 7 ನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚೂಢಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಪ್ರಧಾನ ಕಾರ್ಯದಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಜಿಲ್ಲಾ ವಕ್ತಾರ ನವೀನ್ ಕೆರೆಹಳ್ಳಿ, ರವಿಕುಮಾರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ, ತೋಟೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸೋಮೇಶ್ವರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗರತ್ನ ಕೆಂಗಾಕಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ನಾಗೇಂದ್ರ, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ರಾಜೇಶ್ ಗೌಡಹಳ್ಳಿ, ಎನ್‌ಎಸ್‌ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಜಿ.ಪಂ.ಮಾಜಿ ಸದಸ್ಯರಾದ ಎಸ್.ಸೋಮನಾಯಕ, ಎ.ಆರ್.ಬಾಲರಾಜು, ಕಾವೇರಿಶಿವಕುಮಾರ್, ರಮೇಶ್, ಸೇವಾದಳ ಜಿಲ್ಲಾಧ್ಯಕ್ಷ ಜಯರಾಜು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದರ್, ಮುಖಂಡರಾದ ನಾಗಯ್ಯ, ಭೋಗಾಪುರ ನಾಗೇಂದ್ರ, ಕುಮಾರ್‌ನಾಯಕ್, ಪ್ರಸನ್ನ, ಶಕುಂತಲಾ, ಕಂದಹಳ್ಳಿ ನಂಜುಂಡಸ್ವಾಮಿ, ಬಸವರಾಜು, ಪ್ರಭುಪ್ರಸಾದ್, ನಲ್ಲೂರು ಮಹದೇವಸ್ವಾಮಿ, ಪ್ರಸನ್ನ, ಸಿದ್ದರಾಜು ಇತರರು ಭಾಗವಹಿಸಿದ್ದರು.