ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

  • ಜ್ಞಾನೇಶ್ ಕುಮಾರ್ ಬಂಧಿಸಲು ಜೆ.ಯೋಗೇಶ್ ಆಗ್ರಹ
  • ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ

ಚಾಮರಾಜನಗರ:ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ‌ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೇಶ್ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನ ಮುಂಭಾಗಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಚುನಾವಣಾ ಆಯುಕ್ತರ
ಪ್ರತಿಕೃತಿ ಸುಡಲು ಮುಂದಾದಾಗ ಪೊಲೀಸರು, ಪ್ರತಿಭಟನಾನಿರತರು ನಡುವೆ ತಳ್ಳಾಟ, ನೂಕಾಟ ಉಂಟಾಯಿತು. ಪ್ರತಿಕೃತಿ ಪೊಲೀಸರ ವಶವಾಯಿತು. ನಂತರ ಪ್ರತಿಭಟನಾನಿರತರು ಚುನಾವಣಾ ಆಯುಕ್ತರ ಭಾವಚಿತ್ರ ಸುಟ್ಟು, ಚುನಾವಣಾ ಆಯುಕ್ತರ
ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೇಶ್ ಮಾತನಾಡಿ, ರಾಜ್ಯದಲ್ಲಿ 70 ಸಾವಿರ ಮತದಾರರ ಹಕ್ಕು ರದ್ದತಿಗೆ ಕಾರಣರಾಗಿರುವ ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
  ಪಕ್ಷದ ವರಿಷ್ಠರಾದ ರಾಹುಲ್‌ ಗಾಂಧಿ ಅವರ ಆದೇಶದಂತೆ. ದೇಶಾದ್ಯಂತ, ಕೆಪಿಸಿಸಿ ಅಧ್ಯಕ್ಷರಾದ ಹರಿಪ್ರಸಾದ್ ಬಿ.ಕೆ.ಹರಿಪ್ರಸಾದ್ ಅದೇಶದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಅದರಂತೆ ಚಾಮರಾಜನಗರ ಜಿಲ್ಲೆಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ತೀರ್ಮಾನದಂತೆ ಎಸ್‌ಐಆರ್‌ನಲ್ಲಿ ಸಾಕಷ್ಟು ಅವ್ಯವಹಾರ ಆಗಿದೆ. ರಾಜ್ಯದಲ್ಲಿ 70 ಲಕ್ಷಕ್ಕೂ ಮತದಾರರು ಅನ್ಯಾಯಕ್ಕೊಳಗಾಗಿದ್ದು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿಯಲ್ಲಿ ನೀಡಿದ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ದೇಶಾದ್ಯಂತ ಅನ್ಯಾಯವಾಗಿದೆ. ಆದರಿಂದ ಕೂಡಲೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ರಾಜೀನಾಮೆ ಪಡೆದ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿದರು.

 ಪ್ರತಿಭಟನೆಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ,  ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್,
ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ,
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗರತ್ನ ಕೆಂಕಾಕಿ,  ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ, ಚೇತನ್ ದೊರೈರಾಜು, ಪತ್ರಿಕಾ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ಚಾಮರಾಜನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಕ್ಷಯ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮೋಹನ್ ‌ನಗು, ಸ್ವಾಮಿ, ದರ್ಶನ್, ಯರಿಯೂರು ಜಯಣ್ಣ, ವಡಗೆರೆ ಮಹದೇವಯ್ಯ, ಡಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಸಚಿನ್, ಮಂಗಲ ನವೀನ್, ನವೀನ್,  ಎಪಿಎಂಪಿ ಮಾಜಿ ಅಧ್ಯಕ್ಷ ಸೋಮೇಶ್, ಶಶಾಂಕ್, ಪ್ರಸಾದ್, ಆನಂತ್,  ಸೋಮಣ್ಣ, ರವಿಗೌಡ, ಶಕುಂತಲಾ, ಕಲಾವತಿ, ಕುಮಾರ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *