ಚಾಮರಾಜನಗರ: ನೂತನ ಸಚಿವ ಸಂಪುಟದಲ್ಲಿ ಸಚಿವರಾದ ಎಂ.ಬಿ.ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಚಿವರಾಗಿ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ವೀರಶೈವ ಸಮುದಾಯದ ಮುಖಂಡರು ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ ನಾಗರಾಜಮೂರ್ತಿ ಮಾತನಾಡಿ,ಉಪ್ಪಾರ ಸಮುದಾಯದ ಏಕೈಕ ಸರಳ, ಸಜ್ಜನ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ಕ್ಷೇತ್ರದಲ್ಲಿ ಉತ್ತಮವಾದ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿಗಾಗಿ ಅವರಿಗೆ ಸಚಿವರಾಗಿ ಮಾಡಬೇಕು ಅಲ್ಲದೆ ವೀರಶೈವ ಸಮುದಾಯದ ಪ್ರಭಾವಿ ನಾಯಕರು, ಸಚಿವರಾದ ಎಂ.ಬಿ.ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಸುಮಾರು 20 ಕ್ಕೂ ಹೆಚ್ಚು ಬಾರಿ ಭೇಟಿ ನೀಡಿ ಜಿಲ್ಲೆಯಲ್ಲಿ ಹೆಜ್ಜೆಗುರುತು ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗಿದ್ದಾರೆ. ಅಲ್ಲದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರಭೋಗಾಪುರ,ನಾಗರಾಜಮೂರ್ತಿ, ಶಂಭಪ್ಪ, ಬಸವರಾಜು ಕಾಗಲವಾಡಿ, ಬಿಸಲವಾಡಿ ರವಿ, ಬಸುಮರಿ ಹಾಜರಿದ್ದರು.