ಹೊಸ ಕಾನೂನು, ತಿದ್ದುಪಡಿಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ಚಾಮರಾಜನಗರ: ಹೊಸ ಕಾನೂನುಗಳು ಹಾಗೂ ಆಗಾಗ್ಗೆ ತಿದ್ದುಪಡಿಯಾಗುವ ಕಾನೂನುಗಳ ಬಗ್ಗೆ ಅರೆಕಾಲಿಕ ಸ್ವಯಂ ಸೇವಕರು ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ವ್ಯಾಪಕ ಅರಿವು ಮೂಡಿಸುವಂತೆ ಜಿಲ್ಲಾ ಪ್ರಧಾನ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಸಲಹೆ ಮಾಡಿದರು.

   ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೆÇಲೀಸ್ ಇಲಾಖೆ, ಬೆಂಗಳೂರು ಔಟ್ಲಾಡ್ ಇಂಡಿಯಾ ಫೌಂಡೇಶನ್ ಹಾಗೂ ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಸಹಯೋಗದಲ್ಲಿ 2025-26ನೇ ಸಾಲಿನ ಹೊಸ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

   ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪ್ರಸಕ್ತ ಸಾಲಿಗೆ ನೂತನವಾಗಿ ಆಯ್ಕೆಯಾಗಿರುವ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಬೆಂಗಳೂರು ಔಟ್ಲಾಡ್ ಇಂಡಿಯಾ ಫೌಂಡೇಶನ್‍ನ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತಿದೆ. ಬಡವರು, ದುರ್ಬಲರು, ನಿರ್ಗತಿಕರು, ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಎಲ್ಲರಿಗೂ ಹೊಸ ಹಾಗೂ ತಿದ್ದುಪಡಿಯಾಗುವ ಕಾನೂನುಗಳ ಮಾಹಿತಿ ಅಗತ್ಯವಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜ್ಞಾನ, ತಿಳಿವಳಿಕೆಯನ್ನು ನವೀಕರಿಸುವುದು, ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಪರಿಹರಿಸಿಕೊಳ್ಳಲು ಈ ತರಬೇತಿಯು ನೆರವಾಗಲಿದೆ ಎಂದರು.

   ಕಾನೂನುಗಳು ನಿಂತ ನೀರಲ್ಲ, ಆಗಾಗ್ಗೆ ಬದಲಾಗುವ, ತಿದ್ದುಪಡಿಯಾಗುವ ಹಾಗೂ ಹೊಸದಾಗಿ ಸೃಷ್ಠಿಯಾಗುವ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತವೆ. ಅರೆಕಾಲಿಕ ಸ್ವಯಂ ಸೇವಕರು ಇಂತಹ ಕಾನೂನುಗಳನ್ನು ಜನರ ಮನೆಬಾಗಿಲಿಗೆ ತಲುಪಿಸಿ ಅರ್ಹ ಫಲಾನುಭವಿಗಳಿಗೆ ಉಚಿತ ಕಾನೂನು ನೆರವು ನೀಡುವುದೇ ತರಬೇತಿಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ಕಷ್ಟದಲ್ಲಿರುವ ಜನರಿಗೆ ವಸತಿ, ಪಿಂಚಣಿ, ಉದ್ಯೋಗ, ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲು ಸ್ವಯಂ ಸೇವಕರು ಮುಂದಾಗಬೇಕು. ಒಟ್ಟಾರೆ ಸಮಾಜದಲ್ಲಿ ತಳಮಟ್ಟದ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸಿ ಮಾನವ ಹಕ್ಕು ಬಲಪಡಿಸಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ತಿಳಿಸಿದರು.   

   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಚಾಮರಾಜನಗರ ಬಹಳ ವಿಸ್ತಾರವಾದ ಜಿಲ್ಲೆಯಾಗಿದ್ದು, ಸರ್ಕಾರದಿಂದ ಮಂಜೂರಾಗುವ ಪ್ರತಿಯೊಂದು ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಅಧಿಕಾರಿಗಳಿಂದ ಮಾತ್ರವಲ್ಲ, ಅದಕ್ಕೆ ಅರೆಕಾಲಿಕ ಸ್ವಯಂ ಸೇವಕರು ಜತೆಗೂಡಬೇಕು. ಸ್ವಯಂ ಸೇವಕರು ತಮ್ಮ ಜವಾಬ್ದಾರಿಯ ಜೊತೆಗೆ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸವಾಗಬೇಕು. ಸ್ವಯಂ ಸೇವಕರು ತಮ್ಮ ಕಾನೂನು ಅರಿವು, ಜ್ಞಾನವನ್ನು ಸಮಾಜದಲ್ಲಿ ಪಸರಿಸುವಲ್ಲಿ ತರಬೇತಿಯ ಪೂರ್ಣ ಯಶಸ್ಸು ಸದ್ಯವಾಗಲಿದೆ. ಈ ನಿಟ್ಟಿನಲ್ಲಿ ತರಬೇತಿಯನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಕಿವಿಮಾತು ಹೇಳಿದರು. 

   ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಎಂ.ಎನ್. ಶಶಿಧರ್, ಬೆಂಗಳೂರು ಔಟ್ಲಾಡ್ ಇಂಡಿಯಾ ಫೌಂಡೇಶನ್‍ನ ಸಂಪನ್ಮೂಲ ವ್ಯಕ್ತಿಗಳಾದ ಸಿದ್ದಾರ್ಥ್ ಪಾಟೀಲ್, ಡಿ. ಶಾಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *