ಚಾಮರಾಜನಗರ : ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಜೆಎಸ್ಎಸ್ ಮಹಿಳಾ ಕಾಲೇಜು ಪರಿಸರ ಅಧ್ಯಯನ ವಿಭಾಗದ ಪ್ರೊಫೆಸರ್ ಎಲ್
ಅಮೂಲ್ಯ ಕರೆ ನೀಡಿದರು
ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಪರಿಸರ ಅಧ್ಯಯನ ವಿಭಾಗದ ಇಕೋ ಕ್ಲಬ್ ವತಿಯಿಂದ ಪ್ರಥಮ ವರ್ಷದ ಬಿ.ಎಸ್ಸಿ. ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ‘ಬೆಸ್ಟ್ ಔಟ್ ಆಫ್ ವೇಸ್ಟ್’ ಸ್ಪರ್ಧೆಯನ್ನು ಕಾಲೇಜಿನ ಸಸ್ಯಶಾಸ್ತ್ರ ಪ್ರಯೋಗಾಲಯದಲ್ಲಿ ಆಯೋಜಿಸಲಾಯಿತು. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಎಲ್ ಅಮೂಲ್ಯ ವಿದ್ಯಾರ್ಥಿಗಳು
ಬಿಡಿವಿನ ಸಂದರ್ಭದಲ್ಲಿ
ಪರಿಸರ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಸ್ತುಗಳ ಮರುಬಳಕೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿತ್ತು. ವಿದ್ಯಾರ್ಥಿಗಳು ಬಳಸಿದ ಕಾಗದ, ರಟ್ಟಿನ ಪೆಟ್ಟಿಗೆಗಳು, ಪ್ಲಾಸ್ಟಿಕ್ ಬಾಟಲಿಗಳು, ಬಟ್ಟೆಯ ತುಂಡುಗಳು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಸೃಜನಾತ್ಮಕವಾಗಿ ಬಳಸಿಕೊಂಡು ಉಪಯುಕ್ತ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಪ್ರದರ್ಶಿಸಿದರು.
ಸ್ಪರ್ಧೆಯಲ್ಲಿ ಕಡಿಮೆ ಬಳಕೆ, ಮರುಬಳಕೆ, ಮರುಸಂಸ್ಕರಣೆ, ಪುನರ್ವಿಮರ್ಶೆ ಮತ್ತು ನಿರಾಕರಣೆ (Reduce, Reuse, Recycle, Rethink, Refuse) ಎಂಬ 5R ತತ್ವಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ತ್ಯಾಜ್ಯವೆಂದು ಪರಿಗಣಿಸುವ ವಸ್ತುಗಳನ್ನು ಕೂಡ ಹೊಸ ರೂಪದಲ್ಲಿ ಉಪಯುಕ್ತವಾಗಿಸಬಹುದು ಎಂಬ ಸಂದೇಶವನ್ನು ಕಾರ್ಯಕ್ರಮ ನೀಡಿತು.
ಸ್ಪರ್ಧೆಯ ತೀರ್ಪುಗಾರರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಪ್ರಮೀಳಾ, ಕನ್ನಡ ವಿಭಾಗದ ಪ್ರೊಫೆಸರ್ ಜಮುನಾ ,ವಾಣಿಜ್ಯ ವಿಭಾಗದ ರಾಜೇಶ್ವರಿ ಭಾಗವಹಿಸಿ, ವಿದ್ಯಾರ್ಥಿಗಳ ಕೃತಿಗಳನ್ನು ಸೃಜನಶೀಲತೆ, ನವೀನತೆ, ತ್ಯಾಜ್ಯ ವಸ್ತುಗಳ ಸಮರ್ಪಕ ಬಳಕೆ, ಉಪಯುಕ್ತತೆ, ಅಲಂಕಾರಿಕತೆ ಹಾಗೂ ಪರಿಸರ ಪ್ರಸ್ತುತತೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಪ್ರಭು ಎಂ ಸ್ಪರ್ಧಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಮೆಚ್ಚಿ, ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಇಂತಹ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ಐಕ್ಯೂಎಸಿ ಸಂಯೋಜಕ ಕೆಂಡ್ಗಣ ಸ್ವಾಮಿ ಮತ್ತು ಸಸ್ಯಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ರೇವಣಂಬ. ಬಿ ಸಹ ಸ್ಪರ್ಧಾ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗ ವಿದ್ಯಾರ್ಥಿನಿಯರಿಗೆ ಸಲಹೆ ಸೂಚನೆ ನೀಡಿದರು
ವಿವಿಧ ವಿಭಾಗಗಳ ಅಧ್ಯಾಪಕರು ಕೂಡ ಕಾರ್ಯಕ್ರಮಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ, ಸೃಜನಶೀಲತೆ, ಸಮಸ್ಯೆ ಪರಿಹಾರ ಕೌಶಲ್ಯ, ಆತ್ಮವಿಶ್ವಾಸ, ತಂಡದ ಮನೋಭಾವ ಹಾಗೂ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆಯ ಅರಿವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು
ತ್ಯಾಜ್ಯವನ್ನು ಕೇವಲ ವಿಲೇವಾರಿ ಮಾಡುವ ಬದಲು ಅದರ ಮರುಬಳಕೆ ಮತ್ತು ಮರುಸಂಸ್ಕರಣೆಗೆ ಆದ್ಯತೆ ನೀಡುವ ಮೂಲಕ ಸ್ವಚ್ಛ, ಹಸಿರು ಮತ್ತು ಸುಸ್ಥಿರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿ ತಮ್ಮ ಪ್ರತಿಭೆ ವ್ಯಕ್ತಪಡಿಸಿದರು
