ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15ರಂದು ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಸೈಕಲ್ ಜಾಥವನ್ನು ಸೆಪ್ಟೆಂಬರ್ 15ರಂದು ಬೆಳಿಗ್ಗೆ 6.30 ಗಂಟೆಗೆ ಜಿಲ್ಲಾಡಳಿತ ಭವನದ ಮುಂಭಾಗದಿಂದ ಹಮ್ಮಿಕೊಳ್ಳಲಾಗಿದೆ.
ಸೈಕಲ್ ಜಾಥಾದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ, ನೌಕರರು ಸೇರಿದಂತೆ ಎಲ್ಲರು ಭಾಗವಹಿಸಬಹುದಾಗಿದೆ.
ಸೈಕಲ್ ಜಾಥಾದಲ್ಲಿ ಭಾಗವಹಿಸುವವರು https://forms.gle/TB6urg2Xn6hPzQtw6 ಈ ಲಿಂಕ್ ಮೂಲಕ ಸೆಪ್ಟೆಂಬರ್ 13ರ ಸಂಜೆ 5 ಗಂಟೆಯೊಳಗೆ ನೊಂದಾಯಿಸಿಕೊಳ್ಳಬೇಕು. ಬನ್ನಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನನ್ನ ಮತ ನನ್ನ ಹಕ್ಕು ಎಂಬ ಮಹತ್ವದ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Like this:
Like Loading...
Related