ಚಾಮರಾಜನಗರ: ರಾಜ್ಯದ 25ನೇ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
ಬೆಂಗಳೂರಿನ ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸುತ್ತಿದ್ದಂತೆ ನಗರದ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ಜೈಕಾರ ಕೂಗಿ ಸಂಭ್ರಮಿಸಿದರು.
ಬಳಗದ ಪುಟ್ಟಸ್ವಾಮಿಗೌಡ ಮಾತನಾಡಿ, ರಾಜ್ಯದ 25ನೇ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳಾದ ನಾವೆಲ್ಲರೂ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆ ಮಾಡಲಾಗಿದೆ. ಅವರು ಎರಡು ವರ್ಷವೂ ಸಂಪೂರ್ಣವಾಗಿ ಆಡಳಿತ ನಡೆಸಿ, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳೊಂದಿಗೆ ಅಧಿಕಾರ ಬರಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಗಟ್ಟಿಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಚಾ.ರಂ.ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ಅರುಣ್ ಕುಮಾರ್ ಗೌಡ, ಪುಟ್ಟಸ್ವಾಮಿ ಗೌಡ, ಸೋಮಶೇಖರ, ರವಿಗೌಡ, ಚಿನ್ನುಮುತ್ತು, ಚಿನ್ನಸ್ವಾಮಿ, ರಘು, ಜಯಪ್ರಕಾಶ್, ಸ್ವಾಮಿ, ಮರಿಸ್ವಾಮಿ, ಲೋಕೇಶ್, ಮಹೇಶ್ ಗೌಡ, ರಾಚಪ್ಪ, ಮಾದೇಶ್, ಕೃಷ್ಣಗೌಡ, ನಾಗರಾಜು ಇತರರು ಹಾಜರಿದ್ದರು.