ದಸರಾ ಮಹೋತ್ಸವ : ಕಲಾವಿದರು, ಕಲಾತಂಡಗಳು, ಕವಿಗಳು, ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅಕ್ಟೋಬರ್ 09 (ಕರ್ನಾಟಕ ವಾರ್ತೆ):- ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 17 ರಿಂದ 19ರವರೆಗೆ ವಿವಿಧ ಕಲಾ ಪ್ರಕಾರಗಳ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಕಾರ್ಯಕ್ರಮ ಬಯಸುವ ಕಲಾವಿದರು, ಕಲಾತಂಡಗಳು, ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಹಾಗೂ ಚಿತ್ರ ಸಂತೆಯಲ್ಲಿ ಭಾಗವಹಿಸುವ ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

  ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 104 ರಲ್ಲಿ ಅಕ್ಟೋಬರ್ 12ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು ಎಂದು ಚಾಮರಾಜನಗರ ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *