ಚಾಮರಾಜನಗರ: ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಶ್ರೀರೂಪ ಅವರನ್ನು ಸನ್ಮಾನಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾ.ಗು.ನಾಗರಾಜ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಶಾಲುಹೊದಿಸಿ, ಹಾರಹಾಕಿ, ತಾಂಬೂಲ ನೀಡಿ ಸನ್ಮಾನಿಸಲಾಯಿತು.
ಗಡಿಜಿಲ್ಲೆಯ ಅಭಿವೃದ್ಧಿ ಗೆ ಹೆಚ್ಚು ಒತ್ತು ಕೊಡಬೇಕು. ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಶಿಲ್ಪಾನಾಗ್ ಅವರ ಮಾದರಿಯಲ್ಲಿ ಜಿಲ್ಲೆ ಅಭಿವೃದ್ಧಿ ಪಡಿಸಬೇಕು. ಜಿಲ್ಲೆ ಕನ್ನಡ ಅಭಿವೃದ್ಧಿ ಒತ್ತು ನೀಡುವ ಮೂಲಕ
ಕನ್ನಡ ಹೋರಾಟಗಾರರಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಚಾ.ಗು.ನಾಗರಾಜು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.
ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್,ಸದಸ್ಯರಾದ ಚಂದು,ಸಿ, ಚೇತನ್, ಗುರು ಹಾಜರಿದ್ದರು.