ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯಿಂದ ಡೀನ್ ಡಾ.ಆರ್.ಎನ್.ದೇವಕಿ ಅವರಿಗೆ ಸನ್ಮಾನ

ಚಾಮರಾಜನಗರ; ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್  ಆದ ಡಾ.ಆರ್.ಎನ್.ಡಾ.ದೇವಕಿ ಅವರನ್ನು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ಗು.ನಾಗರಾಜ್, ರಾಜ್ಯ ಉಪಾಧ್ಯಕ್ಷ ಕೆರೆಹಳ್ಳಿ ವೆಂಕಟೇಶ್ ಅವರ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ ಭೇಟಿ ಮಾಡಿ ಶಾಲು ಹೊದಿಸಿ,  ಮೈಸೂರುಪೇಟ ತೊಡಿಸಿ, ಹಾರಹಾಕಿ ಸನ್ಮಾನಿಸಲಾಯಿತು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಿ, ಆಸ್ಪತ್ರೆಯ ಬೆಳೆವಣಿಗೆಗೆ ನಿಮಗೆ ನಮ್ಮ ಸಂಘಟನೆ ವತಿಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಚಾ.ಗು.ನಾಗರಾಜ್ ಹೇಳಿದರು.
ಈ ಸಂದರ್ಭದಲ್ಲಿ ಜನಶಕ್ತಿ ಹೋರಾಟ ಸಮಿತಿ ಅಧ್ಯಕ್ಷ ರಾಮಸಮುದ್ರ ಸುರೇಶ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ  ಸದಸ್ಯರಾದ ಬಂಗಾರನಾಯಕ, ಶ್ರೀನಿವಾಸ, ದೊರೆಸ್ವಾಮಿ ಹಾಜರಿದ್ದರು.

Leave a Reply

Your email address will not be published. Required fields are marked *