ಚಾಮರಾಜನಗರ: ಉಪ್ಪಾರ ಸಮುದಾಯ ಕಣ್ಮಣಿ, ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಉಪಮುಖ್ಯಮಂತ್ರಿ ಅಥವಾ ಉನ್ನತ ಹುದ್ದೆಯನ್ನು
ನೀಡುವಂತೆ ಯಳಂದೂರು ತಾಲೂಕು ಹಿಂದುಳಿದ ವರ್ಗಗಳ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷರು, ವಕೀಲರಾದ ಶಿವರಾಜ್ ಒತ್ತಾಯಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುಟ್ಟರಂಗಶೆಟ್ಟಿ ಅವರು ರಾಜ್ಯದ ಉಪ್ಪಾರ ಜನಾಂಗದ ಏಕೈಕ ಶಾಸಕರು. ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದಾರೆ. ಉಪ್ಪಾರ ಸಮಾಜ ಮತದಾರರು ಹೆಚ್ಚು ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಜಾಗೃತಿ ಮೂಡಿಸಿದ್ದಾರೆ. 2008ರಿಂದ ನಿರಂತರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರದ ಅಭಿವೃದ್ಧಿ ಗಾಗಿ ಶ್ರಮಿಸಿದ್ದಾರೆ.ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಿಂದಲ್ಲೇ ರಾಜಕೀಯ ಆರಂಭಿಸಿದರು. ರಾಜ್ಯದಲ್ಲಿ ಉಪ್ಪಾರ ಸಮುದಾಯ 40 ಲಕ್ಷ ಜನಸಂಖ್ಯೆ ಇದ್ದು, ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಆಗಾಗಿ ಮುಂದಿನ ಸಚಿವ ಸಂಪುಟದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಉಪ ಮುಖ್ಯಮಂತ್ರಿ, ಸಚಿವ ಸ್ಥಾನ ನೀಡಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಪ್ರದೀಪ್ ಬಳೇಪೇಟೆ, ಗೌರವ ಅಧ್ಯಕ್ಷ ನಾಗೇಶ್, ಕಾರ್ಯದರ್ಶಿ ಕೆಸ್ತೂರು ಸಿದ್ದಪ್ಪಸ್ವಾಮಿ, ಯೋಗೇಶ್, ಅಯ್ಯನ ಸರಗೂರು ಮಠದ ಸಂಜಯ್ ಹಾಜರಿದ್ದರು.