- ಕುಡಿಯುವ ನೀರು ಇನ್ನಿತರ ಸಮಸ್ಯೆಗಳ ಪರಿಶೀಲನೆ-ದೊಡ್ಡಿಂದುವಾಡಿ ಶಾಲೆ ವೀಕ್ಷಿಸಿ ಪರಿಸರ ಕಾಳಜಿಗೆ ಮೆಚ್ಚುಗೆ
ಚಾಮರಾಜನಗರ.ಜುಲೈ 17(ಕರ್ನಾಟಕ ವಾರ್ತೆ) ಜಿಲ್ಲಾಧಿಕಾರಿ ಶ್ರೀರೂಪ ಅವರು ಹನೂರು ತಾಲ್ಲೂಕಿನ ಮಾರ್ಟಳ್ಳಿ,ಚಂಗಡಿ ಇನ್ನಿತರ ಗ್ರಾಮಗಳಿಗೆ ಇಂದು ಭೇಟಿ ನೀಡಿ ಕುಡಿಯುವ ನೀರು ಇನ್ನಿತರ ಸಮಸ್ಯೆಗಳನ್ನು ಪರಿಶೀಲಿಸಿದರು.
ಜನರೊಂದಿಗೆ ನೇರ ಸಂವಾದ ನಡೆಸಿ ಅಹವಾಲುಗಳನ್ನು ಆಲಿಸಿದರು.

ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಸ್ಥಳೀಯ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ವಿವರವಾಗಿ ಪರಿಶೀಲನೆ ನಡೆಸಿದರು.
ಮಾರ್ಟಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸ್ಥಳದಲ್ಲಿದ್ದ ಕಾರ್ಯಪಾಲಕ ಇಂಜಿನಿಯರ್ ಗೆ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಚಂಗಡಿ ಗ್ರಾಮ ಭೇಟಿ ನೀಡಿ: ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಾರ್ವಜನಿಕರು ಹಾಗೂ ಗ್ರಾಮದ ಮುಖಂಡರೊಂದಿಗೆ ಸಂವಾದ ನಡೆಸಿದರು.
ದೊಡ್ಡಿಂದುವಾಡಿ ಗ್ರಾಮದಲ್ಲಿ ಸಿ ಎಸ್ ಆರ್ ಅನುದಾನದ ಡಿ ಮೇಲ್ದರ್ಜೆಗೆರುತ್ತಿರುವ ದೊಡ್ಡಿಂದುವಾಡಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಅಗತ್ಯವಿರುವ ಇನ್ನಿತರ ಮೂಲ ಸೌಲಭ್ಯಗಳಿಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.
ಪ್ರಾಥಮಿಕ ಶಾಲೆ ಕೊಠಡಿ, ಅಡುಗೆಮನೆ, ಶಾಲಾ ಮಕ್ಕಳೇ ಬಿಸಿ ಊಟ ಕಾರ್ಯಕ್ರಮಕ್ಕಾಗಿ ನಿರ್ಮಿಸಿರುವ ಕೈತೋಟವನ್ನು ವೀಕ್ಷಿಸಿ ಪ್ರಶಂಸಿಸಿದರು
ಶಾಲೆಯಲ್ಲಿ 368 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರೌಢ ಶಾಲಾ ವಾತಾವರಣವನ್ನು ನೋಡಿ ಹರ್ಷವನ್ನು ವ್ಯಕ್ತಪಡಿಸಿದರು.
ಶಾಲಾ ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಕೊಠಡಿಗಳನ್ನು ಪರಿಶೀಲಿಸಿ ಮಕ್ಕಳು ಸ್ಮಾರ್ಟ್ ಕ್ಲಾಸ್ ಅನ್ನು ಬಳಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಪ್ರೌಢಶಾಲಾ ಶಿಕ್ಷಕರ ಸಭೆ ನಡೆಸಿ ಮಕ್ಕಳಲ್ಲಿ ಬಾಲ್ಯ ವಿವಾಹ ತಡೆ ಪೋಕ್ಸೋ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಜಾಗೃತಿಯನ್ನು ಮೂಡಿಸಲು ಕಾರ್ಯಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚೈತ್ರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸಂತೋಷ್ ಇಮ್ಯಾನ್ಯವೆಲ್,ಅರಣ್ಯ ಇಲಾಖೆ, ನೀರು ಸರಬರಾಜು ವಿಭಾಗದ ಅಧಿಕಾರಿಗಳು ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಇದ್ದರು.