ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶ್ರೀ ರೂಪ ಭೇಟಿ:ಪರಿಶೀಲನೆ

ಚಾಮರಾಜನಗರ : ಗ್ರಾಮ ಆಡಳಿತಾಧಿಕಾರಿ ಹುದ್ದೆ‌ಗಳ ನೇಮಕಾತಿ ಪರೀಕ್ಷೆಯು ಭಾನುವಾರ ಜಿಲ್ಲೆಯಲ್ಲಿ ನಡೆದಿದ್ದು ಜಿಲ್ಲಾಧಿಕಾರಿ ಶ್ರೀ ರೂಪ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ‌ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ನಗರದ ವಿಎಚ್‌ಪಿ ಕಾಲೇಜು, ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜು ಹಾಗೂ ಯಳಂದೂರಿನ ಸರ್ಕಾರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಗಳು, ಭದ್ರತಾ ಕ್ರಮಗಳು ಹಾಗೂ ಅಭ್ಯರ್ಥಿಗಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ಪರೀಕ್ಷೆಯು ಪಾರದರ್ಶಕ, ಶಾಂತಿಯುತ ಹಾಗೂ ಸುಗಮವಾಗಿ ನಡೆಯುವಂತೆ ಕೈಗೊಂಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *