ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಇಂದು ನಗರದ ವಿವಿಧ ಮೆಡಿಕಲ್ ಶಾಪ್‍ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾದಕ ವಸ್ತುಗಳ ನಿರ್ಮೂಲನಾ ಅಭಿಯಾನ ಹಿನ್ನೆಲೆಯಲ್ಲಿ ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರುವ ವಿವಿಧ ಮೆಡಿಕಲ್ ಶಾಪ್‍ಗಳಿಗೆ ಭೇಟಿ ನೀಡಿ, ಔಷಧಿಗಳ ಲಭ್ಯತೆ, ಪರವಾನಗಿ, ನಿಯಮಗಳ ಪಾಲನೆ, ಔಷಧಿ ಸಂಗ್ರಹಣೆಗಳ ವಿಧಾನ, ಅವಧಿ ಮೀರಿದ ಔಷಧಿಗಳ ವಿಲೇವಾರಿ ನಿರ್ವಹಣೆ ಕುರಿತು ಪರಿಶೀಲಿಸಿದರು.
ವೈದ್ಯರ ಸಲಹಾ ಚೀಟಿ ಇಲ್ಲದೇ ಔಷಧಗಳನ್ನು ಮಾರಾಟ ಮಾಡುವುದಿಲ್ಲ ಎಂಬ ಬಗ್ಗೆ ನಾಮಫಲಕಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸುವಂತೆ ಸೂಚಿಸಿದರು.
ವೈದ್ಯರ ಚೀಟಿ ಇಲ್ಲದೇ ಮತ್ತು ಭರಿಸುವ ಔಷಧಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಔಷಧಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಕೆಲ ಮೆಡಿಕಲ್ ಶಾಪ್‍ಗಳ ಮುಂದೆ ಅನೈರ್ಮಲ್ಯ ಹಾಗೂ ತ್ಯಾಜ್ಯಗಳು ಇರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಸಂಬಂಧಪಟ್ಟ ಅಂಗಡಿ ಮಾಲೀಕರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.
ಮೆಡಿಕಲ್ ಶಾಪ್‍ಗಳ ಮುಂಭಾಗ ಸ್ವಚ್ಛತೆಯನ್ನು ಕಾಪಾಡಬೇಕು. ಅವಧಿ ಮುಗಿದ ಮಾತ್ರೆ ಸೇರಿದಂತೆ ಇತರೆ ತ್ಯಾಜ್ಯಗಳನ್ನು ಅಂಗಡಿ ಮುಂಭಾಗ ಬೀಸಾಡಬಾರದು. ಅಂಗಡಿಗಳ ಮುಂಭಾಗದಲ್ಲಿ ಕಸದ ಡಬ್ಬಿಗಳನ್ನು ಇಟ್ಟು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮೆಡಿಕಲ್ ಶಾಪ್‍ಗಳಿಗೆ ಭಿತ್ತಿ ಪತ್ರ ಅಂಟಿಸಿ ಜಾಗೃತಿ ಮೂಡಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಗದೀಶ್, ನಗರಸಭೆಯ ಆರೋಗ್ಯ ಅಧಿಕಾರಿ ಮಂಜುನಾಥ್, ಇತರರು ಈ ಸಂದರ್ಭದಲ್ಲಿ ಇದ್ದರು.
Like this:
Like Loading...
Related