ವಿಶ್ವ ವಿಕಲಚೇತನರ ದಿನಾಚರಣೆ, ಕ್ರೀಡಾಕೂಟಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ: ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿಶ್ವ ವಿಕಲಚೇತನರ ದಿನಾಚರಣೆ ಸಂಬಂಧ ಅಧಿಕಾರಿಗಳು, ವಿಕಲಚೇತನರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನವೆಂಬರ್ 24ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ವಿಶೇಷಚೇತನರಿಗಾಗಿ ಈ ಹಿಂದೆ ನಡೆದ ಕ್ರೀಡೆಗಳ ಜೊತೆಗೆ ಹೆಚ್ಚುವರಿಯಾಗಿ ವಿಶೇಷಚೇತನರ ಸಲಹೆಯಂತೆ ಇನ್ನಷ್ಟು ಕ್ರೀಡೆಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಕ್ರೀಡಾಕೂಟದ ತೀರ್ಪುಗಾರರ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯೋಜಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.

ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಟೀ ಶರ್ಟ್ ವಿತರಣೆ ಮಾಡಬೇಕು. ಉಪಹಾರ ಕುಡಿಯುವ ನೀರು ಪೂರೈಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು. ವೈವಿಧ್ಯಮಯ ಸಾಂಸ್ಕøತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಏರ್ಪಾಡು ಮಾಡಬೇಕು. ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಬರುವವರಿಗೆ ಅನುಕೂಲವಾಗುವಂತೆ ಎಲ್ಲೆಡೆ ಬಸ್ ಗಳ ಕೋರಿಕೆ ನಿಲುಗಡೆಗೆ ಅನುಮತಿಸಬೇಕು ಎಂದರು.

ಡಿಸೆಂಬರ್ ತಿಂಗಳಲ್ಲಿ ವಿಶೇಷಚೇತನರ ಪ್ರತಿನಿಧಿಗಳ ಸಲಹೆಯಂತೆ ಸೂಕ್ತ ದಿನದಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಿದ್ದು, ಇದರ ಪೂರ್ವಭಾವಿ ಸಿದ್ದತೆಗಳನ್ನು ಸಹ ಸಮರ್ಪಕವಾಗಿ ಮುಂಚಿತವಾಗಿಯೇ ಕೈಗೊಳ್ಳಬೇಕು. ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸೂಕ್ತ ವೇದಿಕೆ, ಆಸನಗಳು, ಶಿಷ್ಟಾಚಾರ ಅನುಸಾರ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ವಿಶೇಷಚೇತನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿಶೇಷಚೇತನರಿಗೆ ಪ್ರತ್ಯೇಕ ಬಹುಮಾನ ವಿತರಣೆಯಾಗಬೇಕು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಡೆಯಲಿರುವ ಜಾಥಾಕ್ಕೆ ಕಲಾತಂಡಗಳನ್ನು ನಿಯೋಜಿಸಬೇಕು. ಕಾರ್ಯಕ್ರಮದಂದು ಸಹ ಬಸ್ಸುಗಳಿಂದ ಆಗಮಿಸುವ ವಿಶೇಷಚೇತನರಿಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಕೋರಿಕೆ ನಿಲುಗಡೆಗೆ ಕೆಎಸ್‍ಆರ್‍ಟಿಸಿ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸೂಚಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಸುಭದ್ರದೇವಿ, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪಾಟೀಲ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಗಿರೀಶ್, ವಿಕಲಚೇತನರ ಕಲ್ಯಾಣಾಧಿಕಾರಿ ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ವಿಶೇಷಚೇತನರ ಸಂಘಟನೆಗಳ ಪ್ರತಿನಿಧಿಗಳಾದ ರಮೇಶ್, ಕೃಷ್ಣಮೂರ್ತಿ, ಸಿದ್ದಯ್ಯ, ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *