ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ವಿಶೇಷಚೇತನರಿಗೆ ಅಗತ್ಯ ಸಾಧನ-ಸಲಕರಣೆಗಳ ವಿತರಣೆ

ಚಾಮರಾಜನಗರ: ದಿವ್ಯಾಂಗರಿಗೆ ನೆರವಾಗುವ ಸದುದ್ದೇಶದಿಂದ ಜಿಲ್ಲಾಧಿಕಾರಿ ಶ್ರೀರೂಪ ಅವರು ಜಿಲ್ಲೆಯ ವಿಶೇಷಚೇತನರಿಗೆ ಅವಶ್ಯವಾಗಿರುವ ರೂ. 26 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸಾಧನ-ಸಲಕರಣೆಗಳನ್ನು ನಗರದಲ್ಲಿಂದು ವಿತರಿಸಿದರು.

  ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಗಳ ಸಿ.ಎಸ್.ಆರ್ ನಿಧಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಜಿಲ್ಲೆಯ 235 ಫಲಾನುಭವಿಗಳಿಗೆ 420 ವಿವಿಧ ಬಗೆಯ ಸಾಧನ-ಸಲಕರಣೆಗಳನ್ನು ಜಿಲ್ಲಾಧಿಕಾರಿಯವರು ವಿತರಣೆ ಮಾಡಿದರು. 

  ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ವಿಶೇಷಚೇತನರಿಗೆ ಅಗತ್ಯವಾಗಿರುವ ಸಾಧನ-ಸಲಕರಣೆಗಳನ್ನು ವಿತರಿಸುವುದು ಮಾನವೀಯ ಮೌಲ್ಯವುಳ್ಳ ಕೆಲಸವಾಗಿದೆ. ಜಿಲ್ಲೆಯಲ್ಲಿ ವಿಶೇಷಚೇತನರಿಗೆ ಸಾಕಷ್ಟು ಸಮಸ್ಯೆಗಳಿರುವುದು ಕಂಡುಬಂದಿದೆ. ಅವಶ್ಯ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ವಿಶೇಷಚೇತನರು ಸಾಧನ ಸಲಕರಣೆಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದರು. 

  ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‍ನ ರಾಜ್ಯ ಕಚೇರಿಯ ಪ್ರಧಾನ ವ್ಯವಸ್ಥಾಪಕರಾದ  ಅನೂಪ್ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಯ ಶಿವಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  ವೇದಿಕೆ ಕಾರ್ಯಕ್ರಮದ ಬಳಿಕ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ವಿಶೇಷಚೇತನರಿಗೆ ಸಾಧನ-ಸಲಕರಣೆಗಳನ್ನು ವಿತರಣೆ ಮಾಡಿ ಶುಭ ಹಾರೈಸಿದರು.

Leave a Reply

Your email address will not be published. Required fields are marked *