ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಗುಂಡ್ಲುಪೇಟೆ ತಾಲ್ಲೂಕಿನ ಮುಕ್ತಿಕಾಲೋನಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.ಸ್ಥಳೀಯರ ಅಹವಾಲುಗಳನ್ನು ಆಲಿಸಿದರು.
ಶಾಲೆಯ ಕಾಂಪೌಂಡ್ ದುರಸ್ಥಿ ಹಲವು ಮನೆಗಳು ಹಾಗೂ ಶೌಚಾಲಯಗಳ ಅವಶ್ಯಕತೆ ಇರುವ ಬಗ್ಗೆ ಗಮನಕ್ಕೆ ಬಂದಿತು.
ಕೆಲವು ಮನೆಗಳು ಶಿಥಿಲಗೊಂಡ ಸ್ಥಿತಿಯಲ್ಲಿದ್ದ ಕುರಿತು ಪರಿಶೀಲನೆ ನಡೆಸಿದರು. ಜೇನು ಕುರುಬ ಸಮುದಾಯದ ಕೆಲ ಕುಟುಂಬಗಳಿಗೆ ಇನ್ನೂ ಮನೆಗಳು ಲಭಿಸಿಲ್ಲ ಎಂಬ ಮಾಹಿತಿ ಗಮನಕ್ಕೆ ಬಂದಿತು.
ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಇದೇ ವೇಳೆ ಕಾಲೋನಿಯಲ್ಲಿ ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಹೇಳಿದರು.
ತಹಶಿಲ್ದಾರ್ ತನ್ಮಯ್,ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಷಣ್ಮುಗಂ ಇತರರು ಇದ್ದರು.