- ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಪರಿಶೀಲನೆ
ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಹನೂರು ತಾಲೂಕಿನ ಟಿಬೆಟಿಯನ್ ಸೆಟಲ್ಮೆಂಟ್ ಪ್ರದೇಶಕ್ಕೆ ಇಂದು ಭೇಟಿ ನೀಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸ್ಥಳಗಳನ್ನು ಪರಿಶೀಲಿಸಿದರು.
ಟಿಬೇಟಿಯನ್ ಸೆಟಲ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಮುಖಂಡರ ಜೊತೆ ಜಿಲ್ಲಾಧಿಕಾರಿಯವರು ಸಮಾಲೋಚಿಸಿದರು.
ಪ್ರವಾಸೋದ್ಯಮ ಅಭಿವೃದ್ದಿ ಸಂಬಂಧ ಸ್ಥಳಗಳನ್ನು ವೀಕ್ಷಣೆ ಮಾಡಿದರು.
ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಗಡಿಭಾಗದ ಅರ್ಧನಾರಿಪುರ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ತಪಾಸಣ ಕಾರ್ಯವೈಖರಿಯನ್ನು ಪರಿಶೀಲಿಸಿದರು.ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಲಹೆ-ಸೂಚನೆಗಳನ್ನು ನೀಡಿದರು.