ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ : ಜನಗಣತಿ ಪ್ರಕ್ರಿಯೆ ಪರಿಶೀಲನೆ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ವ್ಯಾಪಕವಾಗಿ ಪರಿಶೀಲನೆ ನಡೆಸಿದ್ದಾರೆ.

ಇಂದು ನಗರದ ಗಾಳಿಪುರ, ರಾಮಸಮುದ್ರ, ಸಿದ್ದಾರ್ಥ ನಗರ ಬಡಾವಣೆ ಸೇರಿದಂತೆ ಇನ್ನಿತರೆ ಪ್ರದೇಶಗಳಿಗೆ ಭೇಟಿ ನೀಡಿ ಜನಗಣತಿ ಕಾರ್ಯಪ್ರಕ್ರಿಯೆಯನ್ನು ವೀಕ್ಷಿಸಿದರು. 

ಗಣತಿದಾರರು ಮನೆಗೆ ತೆರಳಿದ ವೇಳೆ ಜನಗಣತಿ ಪ್ರಕ್ರಿಯೆಯನ್ನು ಹೇಗೆ ನಿರ್ವಹಿಸಲಾಗುತ್ತಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯವರು ಖುದ್ದು ಪರಿಶೀಲನೆ ನಡೆಸಿದರು.

ವಿವಿಧ ಬ್ಲಾಕ್‍ಗಳಲ್ಲಿ ನಡೆಸುತ್ತಿರುವ ಜನಗಣತಿ ಪ್ರಗತಿಯನ್ನು ಪರಿಶೀಲಿಸಿದರು. ನಿಖರ ಮಾಹಿತಿ ಸಂಗ್ರಹಣೆ ಹಾಗೂ ನಿಗದಿಪಡಿಸಿದ ಅವಧಿಯೊಳಗೆ ಕಾರ್ಯ ಪ್ರಗತಿಯನ್ನು ಸಾಧಿಸುವಂತೆ ಗಣತಿದಾರರಿಗೆ, ಅಧಿಕಾರಿಗಳಿಗೆ  ಜಿಲ್ಲಾಧಿಕಾರಿಯವರು ಸೂಚಿಸಿದರು.

ಕ್ಷೇತ್ರಮಟ್ಟದ ಕಾರ್ಯಪದ್ಧತಿ, ಗಣತಿದಾರರು ಹಾಗೂ ಮೇಲ್ವಿಚಾರಕರ ಕಾರ್ಯನಿರ್ವಹಣೆ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಬಾಕಿ ಇರುವ ಕಾರ್ಯಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಿದರು. ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಇದೇ ವೇಳೆ ಗಣತಿ ಸಂಬಂಧ ಮನೆ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೂ ಜಿಲ್ಲಾಧಿಕಾರಿಯವರು ಮಾತನಾಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ನಗರಸಭೆ ಆಯುಕ್ತರಾದ ಪರಶುರಾಮ್ ಛಲವಾದಿ, ಇನ್ನಿತರ ಅಧಿಕಾರಿ, ಸಿಬ್ಬಂದಿ ಈ ಸಂದರ್ಭದಲ್ಲಿ ಇದ್ದರು.  

ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿ ಶಿವಪುರ ಗ್ರಾಮಕ್ಕೂ ಇತ್ತೀಚೆಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಭೇಟಿ ನೀಡಿ ಜನಗಣತಿ ಪ್ರಕ್ರಿಯೆಯನ್ನು ವೀಕ್ಷಿಸಿದ್ದರು.

Leave a Reply

Your email address will not be published. Required fields are marked *