ಕೊಳ್ಳೇಗಾಲ ತಾಲೂಕಿನ ವಿವಿಧೆಡೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ; ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀ ರೂಪ ಅವರು ಇಂದು ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೊಳ್ಳೇಗಾಲ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಲಿಂಗಣಪುರದಲ್ಲಿ ನಿರ್ಮಾಣವಾಗುತ್ತಿರುವ ಸಿ.ಸಿ. ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಮುಡಿಗುಂಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಐ.ಟಿ.ಐ ಕಾಲೇಜು ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮುಡಿಗುಂಡ ಸೇತುವೆ ದುರಸ್ತಿ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ರಾಚಪ್ಪಾಜಿನಗರ ಗ್ರಾಮದ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಕೊಳ್ಳೇಗಾಲ ಪಟ್ಟಣದ ಹೆಚ್. ನಾಗಪ್ಪ ಬಡಾವಣೆಯಲ್ಲಿ ಚರಂಡಿ ನೀರಿನ ಸಮಸ್ಯೆಯನ್ನು ಪರಿಶೀಲಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಚಿಕ್ಕಲ್ಲೂರು ಕ್ಷೇತ್ರಕ್ಕೂ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಉಪವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ,ತಹಶಿಲ್ದಾರ್ ಬಸವರಾಜು ಇನ್ನಿತರ ಅಧಿಕಾರಿಗಳು‌ ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *