ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕೆರೆಗಳ ಅಭಿವೃದ್ಧಿ: ದಿನೇಶ್

  • ಹಂಡರಕಳ್ಳಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಭಿವೃದ್ಧಿಪಡಿಸಿದ  ಕೆರೆಯನ್ನು ಗ್ರಾಮಸ್ಥರಿಗೆ ಹಸ್ತಾಂತರ ಕಾರ್ಯಕ್ರಮ

ಚಾಮರಾಜನಗರ: ತಾಲೂಕಿನ ಹಂಡರಕಳ್ಳಿಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ.ಹೇಮಾವತಿ ವಿ.ಹೆಗ್ಗಡೆ ಯವರ ಮಾರ್ಗ ದರ್ಶನದೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ವತಿಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಗ್ರಾಮಸ್ಥರ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ಹಂಡರಕಳ್ಳಿ  ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಪ್ರಮಾಣಪತ್ರ ವಿತರಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ‌ ನಿರ್ದೇಶಕ ದಿನೇಶ್ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯ ಅನುದಾನ 3.22 ಲಕ್ಷ, ಗ್ರಾಮಸ್ಥರ ಪಾಲು 80 ಸಾವಿರ ಒಟ್ಟು 4.02  ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಸರ್ಕಾರಿ ಕಟ್ಟೆ ಕೆರೆ ಅಭಿವೃದ್ಧಿ ಪಡಿಸಲಾಗಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಭಿವೃದ್ಧಿಪಡಿಸಿರುವ ಕೆರೆಯನ್ನು ಗ್ರಾಮಸ್ಥರು ಉತ್ತಮ ರೀತಿಯಲ್ಲಿ ನಿರ್ವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಗುರುಗಳಾದ ಶ್ರೀವೀರೇಂದ್ರ ಹೆಗಡೆ ಅವರು ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಗ್ರಾಮದ ಜೀವನಾಡಿಗಳಾದ ಕೆರೆಗಳಲ್ಲಿ ಗ್ರಾಮ ಪಂಚಾಯಿತಿ, ಗ್ರಾಮಸ್ಥರ ಸಹಯೋಗದಲ್ಲಿ ಕೆರೆ ಹೂಳು ತೆಗೆಯುವ ಕೆಲಸವನ್ನು ಮಾಡುತ್ತದೆ. ನಂತರ ಕೆರೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಮಾಡಲಾಗುತ್ತಿದೆ. ಕೆರೆಯಲ್ಲಿ ನೀರು ತುಂಬಿದರೆ ಗ್ರಾಮದಲ್ಲಿ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಪೂಜ್ಯರು ಮನಗಂಡು ನಮ್ಮ ಯೋಜನೆಗಳ ಕಾರ್ಯಕ್ರಮಗಳ ಮೂಲಕ ಗ್ರಾಮಗಳಲ್ಲಿರುವ ಕೆರೆಗಳನ್ನು ಗುರುತಿಸಿ, ಹೂಳು ಎತ್ತಿ ಅಭಿವೃದ್ಧಿ ಪಡಿಸಿ ಗ್ರಾಮಸ್ಥರಿಗೆ ಹಸ್ತಾಂತರ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆರೆ ಸಮಿತಿ ಅಧ್ಯಕ್ಷ ಪ್ರಕಾಶ್‌ ಮಾತನಾಡಿ, ಗ್ರಾಮದಲ್ಲಿ ಸುಮಾರು 35 ವರ್ಷಗಳಿಂದ ಲ್ಲೂ ಪಾಳು ಬಿದ್ದಿತು. ಅದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯು ಗುರುತಿಸಿ ಗ್ರಾಮಸ್ಥರ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿಕೊಟ್ಟಿರುವುದು ತುಂಬಾ ಸಂತಸವಾಗಿದೆ. ಇದು ಗ್ರಾಮದ ಅಂತರ್ಜಲ ಅಭಿವೃದ್ಧಿಗೆ ಕಾರಣವಾಗಿದೆ. ಅದಕ್ಕಾಗಿ ಗ್ರಾಮಸ್ಥರ ಪರವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆ ಯವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯ ತಾಲೂಕು ಯೋಜನಾಧಿಕಾರಿ  ರವಿಚಂದ್ರ,  ವಲಯ ಮೇಲ್ವಿಚಾರಕ ಶಿವಣ್ಣ, ಕೃಷಿ ಮೇಲ್ವಿಚಾರಕ ಸುಪ್ರೀತ್ ಕುಮಾರ್  ಸೇವಾಪ್ರತಿನಿಧಿ ಶಾರದ, ಕೆರೆ ಗೌರವಾಧ್ಯಕ್ಷ ರಾಮಪ್ಪ, ಅಧ್ಯಕ್ಷ ಪ್ರಕಾಶ್ ಹಂಡರಕಳ್ಳಿ, ಉಪಾಧ್ಯಕ್ಷ ಎಚ್.ಎನ್.ಮರಿಸ್ವಾಮಿ, ಕೋಶಾಧಿಕಾರಿ ಮೂರ್ತಿ, ಜೊತೆ ಕಾರ್ಯದರ್ಶಿ ರಾಜಪ್ಪ, ತಿಬ್ಬಣ್ಣ,
ಚೌಡಶೆಟ್ಟಿ, ರಾಜು, ಮಹದೇವಶೆಟ್ಟಿ, ಮಹದೇವ, ಮಹಾದೇವಸ್ವಾಮಿ, ಇತರರು ಹಾಜರಿದ್ದರು.

Leave a Reply

Your email address will not be published. Required fields are marked *