ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಮತ್ತು ತಾಲ್ಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ ನಗರದ ಉಪನೋಂದಣಿ ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಚಾಮರಾಜನಗರ ತಾಲೂಕು ಪರವಾನಗಿ ಹೊಂದಿದ ಜಿಲ್ಲಾ ಪತ್ರ ಬರಹಗಾರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಮಾತನಾಡಿ, ಹೊರರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲಿ ಪತ್ರ ಬರಹಗಾರರಿಗೆ ಪ್ರತ್ಯೇಕ ಲಾಗಿನ್ ನೀಡುವುದು.
ಕಾವೇರಿ 2.0 ತಂತ್ರಾಂಶದಲ್ಲಿ ಆಗುತ್ತಿರುವ ತೊಂದರೆಗಳನ್ನು ಆದಷ್ಟು ಬೇಗನೆ ಸರಿಪಡಿಸಬೇಕು.
ಅನಧಿಕೃತ ವ್ಯಕ್ತಿಗಳನ್ನು ತಡೆಗಟ್ಟುವುದು ಮತ್ತು ಕರ್ನಾಟಕ ಎಲ್ಲಾ ಪತ್ರ ಬರಹಗಾರರಿಗೆ ಏಕ ಮಾದರಿಯ ಗುರುತಿನ ಚೀಟಿಯನ್ನು ನೀಡುವುದು
ದಸ್ತು ಬರಹಗಾರರಿಗೆ ಸೇವಾ ಭದ್ರತೆ ಒದಗಿಸುವುದು ಎಂದು ಒತ್ತಾಯಿಸಿದರು.