ಜಿಲ್ಲಾ ವಕೀಲರ ಸಂಘದ ವತಿಯಿಂದ ಕರ್ನಾಟಕ ಬಂದ್ ಗೆ ಬೆಂಬಲ: ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಖಂಡಿಸಿ ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಗುರುವಾರ ನೀಡಿದ್ದ ಕರ್ನಾಟಕ ಬಂದ್ ಗೆ ಬೆಂಬಲ ನೀಡಿ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಅವರು ತಿಳಿಸಿದರು.

ನಗರದ ಜಿಲ್ಲಾ ಕೋರ್ಟ್ ಆವರಣದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪನ್ನು ಖಂಡಿಸಿ ನಡೆಯುತ್ತಿರುವ ಕರ್ನಾಟಕ ಬಂದ್ ಕರೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಖಂಡನೀಯ. ನಮ್ಮ ರಾಜ್ಯದ ಜನತೆಗೆ ಕುಡಿಯಲು ನೀರು ಇಲ್ಲ ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ವ್ಯವಸಾಯಕ್ಕೋಸ್ಕರ ನೀರು ಬಿಡುವ ಕಾವೇರಿ ಪ್ರಾಧಿಕಾರ ನಿರ್ವಹಣಾ ಮಂಡಳಿಯ ತೀರ್ಪು ಸಮಾಂಜಸವಲ್ಲ, ಹಾಗೂ ಕಾನೂನು ಬದ್ಧವಾದದ್ದಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಮನ ಹರಿಸದೆ ಇರುವುದು ಶೋಚನಿಯ ವಿಚಾರವಾಗಿದೆ. ಆದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಡಳಿಗೆ ತಮಿಳುನಾಡಿಗೆ ನೀರು ಹರಿಸುವುದನ್ನ ಕೈ ಬಿಡಬೇಕು ಎಂಬ ಸೂಚನೆಯನ್ನು ನೀಡಬೇಕು
ಇದರಿಂದ ಕರ್ನಾಟಕದ ಎಲ್ಲಾ ಜನರಿಗೆ ಅನುಕೂಲವಾಗುತ್ತದೆ. ಇಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಂಡಳಿಯ ವಿರುದ್ಧ ರೈತಪರ, ಪ್ರಗತಿಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಗೆ ನಮ್ಮ ಜಿಲ್ಲಾ ವಕೀಲರ ಸಂಘದ ವತಿಯಿಂದ ಕೋರ್ಟ್ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಶಿವರಾಮ ಮಾತನಾಡಿ,
ಕಾವೇರಿ ನೀರು ಹರಿಸುವ ಕಾವೇರಿ ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾದದ್ದು, ನಮ್ಮ ಜನರಿಗೆ ಕುಡಿಯಲು ನೀರಿನ ಸಮಸ್ಯೆ ಹೆಚ್ಚಾಗಿದ್ದು ಇಂತಹ ಸಂದರ್ಭದಲ್ಲಿ ತಮಿಳುನಾಡು ರಾಜ್ಯಕ್ಕೆ ನೀರು ಬಿಡುವ ನಿರ್ಧಾರ ಅವೈಜ್ಞಾನಿಕವಾದದ್ದು, ಈ ವಿಚಾರವನ್ನು ಕೂಡಲೇ ಕೈಬಿಡಬೇಕು. ಸರ್ಕಾರಗಳು ಮಧ್ಯಪ್ರವೇಶಿಸಿ ನೀರು ಬಿಡುವುದನ್ನು ನಿಲ್ಲಿಸಬೇಕು. ರಾಜ್ಯದಾದ್ಯಂತ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ನಮ್ಮ ಸಂಘದ ವತಿಯಿಂದ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರಂಗಸ್ವಾಮಿ, ಸಹ ಕಾರ್ಯದರ್ಶಿಗಳಾದ ಸಿಸಿ. ರಮೇಶ್, ಸಾಮಾನ್ಯ ಸದಸ್ಯರಾದ ಉಮೇಶ್,ಸವಿತಾ, ವಿಜಯ್ ಮತ್ತು ಮಲ್ಲೇಶ್ ಪ್ರಭು, ವಕೀಲರಾದ
ದಲಿತ್ ರಾಜು ಶಿವಲಿಂಗೇಗೌಡರು, ವಿ.ನಾಗರಾಜೇಂದ್ರ, ಎ.ಎಸ್. ವಿಜಯಕುಮಾರ್, ನಾಗರಾಜು ಬದನಗುಪ್ಪೆ, ಹೊಂಗನೂರು ಮಹೇಶ್,ಜಯಪ್ರಕಾಶ್,ಎಸ್, ಮಂಜು ಹರವೆ,ಶಿವಕುಮಾರ್,ಸಿಎನ್ ಮಾದು, ಲೋಕೇಶ್,ಮಹೇಂದ್ರ, ನಾಗಾರ್ಜುನ್ ಪೃಥ್ವಿ, ಅರುಣ್ ಕುಮಾರ್ ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *