ಚಾಮರಾಜನಗರ: ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 4ನೇ ಹಂತದ ಯೋಜನೆಯಡಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಸೋಮವಾರ (ಏ.27) ಪರಿಶೀಲಿಸಿದರು.
ನಗರದ ವಾರ್ಡ್ ಸಂಖ್ಯೆ 19, 20 ಹಾಗೂ 29ರಲ್ಲಿ ಸುಮಾರು 118 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 1.18 ಕಿ.ಮೀ ಉದ್ದದ ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು. 292 ಮೀಟರ್ ಉದ್ದದ ಚರಂಡಿ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರಾದ ವೆಂಕಟೇಶ್, ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಕಾಶ್, ಇತರೆ ಅಧಿಕಾರಿಗಳು ಇದ್ದರು.
Like this:
Like Loading...
Related