ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಗುಂಡ್ಲುಪೇಟೆ ಭಾಗದ ಶಾಲೆ, ದೇವಾಲಯ, ಪ್ರವಾಸಿ ತಾಣಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.
ಗುಂಡ್ಲುಪೇಟೆ ಪಟ್ಟಣದ ಶತಮಾನ ಪೂರೈಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕತುಪ್ಪೂರಿನಲ್ಲಿರುವ ಆದರ್ಶ ಶಾಲೆಗೆ ಭೇಟಿ ಕೊಟ್ಟು ವೀಕ್ಷಿಸಿದ ಜಿಲ್ಲಾಧಿಕಾರಿಯವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ತ್ರಿಯಂಬಕಪುರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ದ ತ್ರಿಯಂಬಕೇಶ್ವರ ದೇವಾಲಯಕ್ಕೆ ತೆರಳಿ ದೇವಾಲಯದ ವಿನ್ಯಾಸ ಹಾಗೂ ವಾಸ್ತು ಶಿಲ್ಪವನ್ನು ವೀಕ್ಷಿಸಿದರು. ದೇವಾಲಯದ ಐತಿಹಾಸಿಕ ಹಿನ್ನೆಲೆ ಹಾಗೂ ಸಂರಕ್ಷಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರಸಿದ್ದ ಪ್ರವಾಸಿ ತಾಣವಾದ ಬಂಡೀಪುರದ ಸಫಾರಿ ಕೇಂದ್ರಕ್ಕೆ ಭೇಟಿ ನೀಡಿ ಪ್ರವಾಸಿಗರಿಗೆ ಒದಗಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಸಫಾರಿ ಕೇಂದ್ರದಲ್ಲಿ ಮಾರಾಟ ಮಾಡಲಾಗುತ್ತಿರುವ ಉತ್ಪನ್ನಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಯವರು ಸ್ಥಳೀಯವಾಗಿ ಉತ್ಪಾದಿಸಿದ ಕರಕುಶಲ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಅರಣ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಗುಂಡ್ಲುಪೇಟೆ ಹೊರವಲಯದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೇಲುಕಾಮನಹಳ್ಳಿಯಲ್ಲಿ ಬುಡಕ್ಟು ವಿವಿದ್ದೋದ್ದೇಶ ಕೇಂದ್ರ ಕಾಮಗಾರಿಯನ್ನು ವೀಕ್ಷಿಸಿದರು.
ಭೇಟಿಯ ವೇಳೆ ತಹಶೀಲ್ದಾರ್ ತನ್ಮಯ್, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ವಲಯ ಅರಣ್ಯಾಧಿಕಾರಿ ಸತೀಶ್, ಗುಂಡ್ಲುಪೇಟೆ ಪುರಸಭೆ ಮುಖ್ಯಾಧಿಕಾರಿ ಶರವಣ, ಇತರರು ಇದ್ದರು.
Like this:
Like Loading...
Related