ಚಾಮರಾಜನಗರ, ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ):- ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಚಾಮರಾಜನಗರ ತಾಲೂಕು ವ್ಯಾಪ್ತಿಯ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ 1 ಕೋಟಿಗೂ ಅಧಿಕ ವೆಚ್ಚದ ಬೋರ್‍ವೆಲ್ ಪರಿಕರಗಳನ್ನು ವಿತರಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ನೀಡಲಾಗುವ 2024-25ಸಾಲಿಗೆ ಸಂಬಂಧಿಸಿದಂತೆ ಇಬ್ಬರು ಹಾಗೂ 2025-26ನೇ ಸಾಲಿನ 31 ಮಂದಿ ಸೇರಿದಂತೆ ಒಟ್ಟು 33 ಮಂದಿ ಫಲಾನುಭವಿಗಳಿಗೆ ಪರಿಕರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ವಿತರಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಡೀ ರಾಜ್ಯದಲ್ಲಿ ಬರ ಆವರಿಸಿದ್ದು, ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ತೀವ್ರ ಬರಪೀಡಿತ ತಾಲೂಕುಗಳಾಗಿ ಘೋಷಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಸರ್ಕಾರದ ಮಟ್ಟದಲ್ಲಿ ಟೆಂಡರ್ ಕರೆದು ತಾಲೂಕು ವ್ಯಾಪ್ತಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗಿದೆ ಎಂದರು.
ರೈತರಿಗೆ ಇದು ಅನುಕೂಲವಾಗಲಿದೆ. ರೈತರು ಇಂದು ಮಳೆ ನಂಬಿ ಬೆಳೆ ಬೆಳೆಯುವ ಪರಿಸ್ಥಿತಿಯಲ್ಲಿಲ್ಲ. ಹನಿ ನೀರಾವರಿ ಹಾಗೂ ತುಂತುರು ಹನಿ ನೀರಾವರಿ ವ್ಯವಸ್ಥೆಯನ್ನು ಅವಲಂಬಿಸಬೇಕಿದೆ. ಸರ್ಕಾರವು ರೈತರ ಪರವಾಗಿದೆ. ರೈತರ ಕಲ್ಯಾಣಕ್ಕಾಗಿ ವಿವಿಧ ನಿಗಮಗಳಿಂದ ಅಗತ್ಯ ಸೌಲಭ್ಯ, ಸವಲತ್ತು ನೀಡಲಾಗುತ್ತಿದೆ. ಆಯ್ಕೆಯಾಗಿರುವ ಫಲಾನುಭವಿಗಳಿಗೆ ತಲಾ 3,75,000 ರೂ. ವೆಚ್ಚದಲ್ಲಿ ಸವಲತ್ತು ವಿತರಣೆ ಮಾಡಲಾಗಿದೆ. ರೈತರು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎಸ್. ರಾಜು, ಇತರÀರು ಇದೇ ಸಂದರ್ಭದಲ್ಲಿ ಇದ್ದರು.