ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ 2. ಕೋಟಿ ರೂ.ವೆಚ್ಚದ ಸೇತುವೆ ಕಾಮಗಾರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿ, ಗ್ರಾಮಸ್ಥರ ಮನವಿಯಂತೆ ಗ್ರಾಮದಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ 2 ಕೋಟಿ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದು, ಇಂದು ಗುದ್ದಲಿಪೂಜೆ ಮಾಡಲಾಗಿದೆ. ಒಂದು ಉತ್ತಮ ಸೇತುವೆ ನಿರ್ಮಾಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ನಲ್ಲೂರು ಸೋಮೇಶ್ವರ, ಕನಿಷ್ಟ ವೇತನಾ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಎಸ್.ಪಿಕೆ ಉಮೇಶ್,ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಎಇಇ ಶಾಂತಮ್ಮ, ಮುಖಂಡರಾದ ನಾಗಯ್ಯ, ಶಿವಕುಮಾರ್, ಕಮಲ್ ಖಾನ್, ಕೋಡಿಮೋಳೆ ಪ್ರಕಾಶ್,ರಂಗಸ್ವಾಮಿ, .ಮುದ್ದಮಲ್ಲಯ್ಯ, ಎನ್.ಜಿ.ಬಸವರಾಜು ಹಾಜರಿದ್ದರು.