ಚಾಮರಾಜನಗರ: ಇದೇ ನವೆಂಬರ್ 26ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯ ಅಂಗವಾಗಿ ವಿವಿಧೆಡೆ ಪ್ರಚಾರಕ್ಕಾಗಿ ಸಂಚರಿಸಲಿರುವ ಎಲ್ಇಡಿ ಪರದೆ ವಾಹನಕ್ಕೆ ಪಶುಸಂಗೋಪನೆ , ರೇಷ್ಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಶನಿವಾರ ಸಂಜೆ ಚಾಲನೆ ನೀಡಿದರು.
ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿ ವಾಹನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಸಚಿವರು ಪ್ರಚಾರಕ್ಕೆ ಚಾಲನೆ ನೀಡಿದರು.
ಪ್ರಚಾರ ವಾಹನದ ಮೂಲಕ ಸಂವಿಧಾನದ ಮಹತ್ವ, ಆಶಯಗಳು ಹಾಗೂ ಸಂವಿಧಾನ ದಿನಾಚರಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
