ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ಸಿ.ಎಸ್. ಅಕ್ಷಯ್, ಎಸ್.ಮಹಾಂತೇಶ್ ಪ್ರಥಮ, ಉಲ್ಲಾಸ್, ದುಶ್ಯಂತ ದ್ವಿತೀಯ ಸ್ಥಾನ

  • ಸಿಂಗಲ್ಸ್ ನಲ್ಲಿ ಉಲ್ಲಾಸ್ ಪ್ರಥಮ, ಜಾಯಿಸನ್ ದ್ವೀತೀಯ ಸ್ಥಾನ : ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ಪ್ರಶಸ್ತಿ ವಿತರಣೆ

ಚಾಮರಾಜನಗರ: ಜಿಲ್ಲಾ ಮಟ್ಟದ ದಸರಾ ಕ್ರೀಡಾಂಗಣದಲ್ಲಿ  ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ಸಿ.ಎಸ್.ಅಕ್ಷಯ್, ಎಸ್.ಮಹಾಂತೇಶ್ ಪ್ರಥಮ ಸ್ಥಾನ, ಉಲ್ಲಾಸ್, ದುಶ್ಯಂತ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಉಲ್ಲಾಸ್, ದ್ವಿತೀಯ ಸ್ಥಾನ ಜಾಯಿಸನ್ ಪಡೆದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಖಾತೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ವಿಜೇತರಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಾಡಾಧ್ಯಕ್ಷ ಪಿ.ಮರಿಸ್ವಾಮಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಆರ್. ಗಿರೀಶ್, ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್, ಕ್ರೀಡಾಪಟುಗಳು

Leave a Reply

Your email address will not be published. Required fields are marked *