ಜ.21 ಮತ್ತು 22 ರಂದು ನಗರದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ.ಸಿ.ಎನ್.ರೇಣುಕಾದೇವಿ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆ
ರಾಜ್ಯ ಸರ್ಕಾರಿ ನೌಕರರ ಸಂಘದ  ಜಿಲ್ಲಾ ಘಟಕದ ವತಿಯಿಂದ ಜ.21 ಮತ್ತು 22 ರಂದು ನಗರದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ  ಜಿಲ್ಲಾಧ್ಯಕ್ಷೆ ಡಾ. ಸಿ. ಎನ್ .ರೇಣಕಾದೇವಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜ.21 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂ ಕಟೇಶ್ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಸದ ಸುನೀಲ್‌ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿವೇಕಾನಂದ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೋನಾರೋತ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

 ಪುರುಷರ ವಿಭಾಗದಲ್ಲಿ 40 ವರ್ಷ ಒಳಪಟ್ಟವರಿಗೆ, 40 ರಿಂದ 50 ಹಾಗೂ 50 ರಿಂದ 60 ವರ್ಷದವರು ಎಂದು ಮೂರು ವಿಭಾಗದಲ್ಲಿ, ಮಹಿಳೆಯರ ವಿಭಾಗದಲ್ಲಿ 35 ವರ್ಷ ಒಳಪಟ್ಟವರು ಹಾಗೂ 35 ವರ್ಷ ಮೇಲ್ಪಟ್ಟವರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಬಾರಿ ಅಗ್ನಿಶಾಮಕ ಹಾಗೂ ದೈಹಿಕ ಶಿಕ್ಷಕರಿಗೂ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಎರಡು ದಿನಗಳ ಓಓಡಿ ಪ್ರಮಾಣಪತ್ರ  ನೀಡಲಾಗುವುದು. ಕ್ರೀಡಾಂಗಣದಲ್ಲಿ ಲಭ್ಯವಿರುವ ಕ್ರೀಡೆಯನ್ನು ಮಾತ್ರ ನಡೆಸಲಾಗುವುದು. ಉಳಿದಂತೆ ಕ್ರೀಡಾ ಸೌಲಭ್ಯಗಳಿಲ್ಲದ ಕ್ರೀಡೆಗಳನ್ನು ಮೈಸೂರಿನಲ್ಲಿ ನಡೆಸಲಾಗುವುದು ಎಂದರು.
  ಪತ್ರಿಕಾಗೋಷ್ಠಿಯಲ್ಲಿ ಸಂಘದ  
ಕಾರ್ಯದರ್ಶಿ ಭರತ್‌ ಭೂಷಣ್, ಕಾರ್ಯಾಧ್ಯಕ್ಷ ಮಹದೇವಸ್ವಾಮಿ, ಖಜಾಂಚಿ ಶಿವಕುಮಾರಯ್ಯ,  
  ರಾಜ್ಯ ಪರಿಷತ್ ಸದಸ್ಯ ನಟರಾಜು, ಗೌರವ ಅಧ್ಯಕ್ಷ ಎಸ್.ಮಹದೇವಯ್ಯ ಹಾಜರಿದ್ದರು

Leave a Reply

Your email address will not be published. Required fields are marked *