ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ-ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಇನ್ನಿತರ ಇಲಾಖೆ, ನಿಗಮ ಆಶ್ರಯದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾ ಕೇಂದ್ರದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಉದ್ಯೋಗ ನೇಮಕಾತಿ ಪತ್ರ ವಿತರಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಉದ್ಯೋಗ ನೇಮಕ ಪತ್ರ ನೀಡಿ ಶುಭ ಹಾರೈಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ. ಡಿ.ಸಿ, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಸೋಮೇಶ್ವರ, ಇತರರು ಈ ಸಂದರ್ಭದಲ್ಲಿ ಇದ್ದರು.
ಇಂದು ನಡೆದ ಉದ್ಯೋಗ ಮೇಳಕ್ಕೆ ಆನ್ ಲೈನ್ ನಲ್ಲಿ 668, ಆಫ್ ಲೈನ್ ನಲ್ಲಿ 602 ಅಭ್ಯರ್ಥಿಗಳು ಸೇರಿದಂತೆ ಒಟ್ಟು 1290 ಅಭ್ಯರ್ಥಿಗಳು ನೊಂದಣಿಯಾಗಿದ್ದರು. ಇವರಲ್ಲಿ 495 ಪುರುಷರು, 790 ಮಹಿಳೆಯರು ಸೇರಿದ್ದಾರೆ. ಉದ್ಯೋಗ ಮೇಳದಲಿ 101 ಉದ್ಯೋಗದಾತ ಕಂಪನಿಗಳು ಭಾಗವಹಿಸಿದ್ದವು. 85 ಪುರುಷರು, 108 ಮಹಿಳೆಯರು ಸೇರಿದಂತೆ ಒಟ್ಟು 193 ಅಭ್ಯರ್ಥಿಗಳು ಸ್ಥಳದಲ್ಲಿಯೇ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ.
190 ಪುರುಷರು, 290 ಮಹಿಳೆಯರು ಸೇರಿದಂತೆ ಒಟ್ಟು 480 ಅಭ್ಯರ್ಥಿಗಳು ಉದ್ಯೋಗಕ್ಕಾಗಿ 2ನೇ ಹಂತದ (ಶಾರ್ಟ್ ಲಿಸ್ಟ್) ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.
ಇಂದು ಬೆಳಿಗ್ಗೆ ಜೆ.ಹೆಚ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸ್ಥಳೀಯ ನಿರುದ್ಯೋಗಿ ಯುವಜನರು ಸ್ವಾವವಲಂಬಿ ಬದುಕು ಕಟ್ಟಿಕೊಳ್ಳಬೇಕೆಂಬ ಉದ್ದೇಶದಿಂದ ಆಯೋಜಿಸಲಾಗುವ ಉದ್ಯೋಗ ಮೇಳ ದಂತಹ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರತಿಯೊಬ್ಬರು ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯವಾಗುವುದಿಲ್ಲ. ಖಾಸಗಿ ಕ್ಷೇತ್ರಗಳಲ್ಲೂ ಸಾಕಷ್ಟು ಉತ್ತಮ ಉದ್ಯೋಗಗಳು ಇವೆ. ಅರ್ಹತೆಕ್ಕನುಗುಣವಾಗಿ ಉದ್ಯೋಗ ಪಡೆಯಲು ನೆರವಾಗಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇನ್ನಿತರ ಇಲಾಖೆಗಳು ಸ್ಥಳೀಯವಾಗಿ ಉದ್ಯೋಗ ಮೇಳವನ್ನು ಏರ್ಪಡಿಸುತ್ತಿವೆ. ಇಂತಹ ಅವಕಾಶವನ್ನು ಯುವಜನರು ಬಳಸಿಕೊಳ್ಳಬೇಕು ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್ ಅವರು ಯುವ ಜನರಿಗೆ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದಿಂದ ಕಳೆದ ವರ್ಷವು ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಅಂದಿನ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಲಭಿಸಿತ್ತು. ಈ ಬಾರಿ 100ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿವೆ. ಕಳೆದ ಬಾರಿಗಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಎಲ್ಲ ಅನುಕೂಲಗಳನ್ನು ಕಲ್ಪಿಸಲಾಗಿದೆ ಎಂದರು.
ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ ಅವರು ಮಾತನಾಡಿ ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಆಯೋಜಿಸುತ್ತಾ ಬರಲಾಗುತ್ತಿದೆ. ಅರ್ಹರೆಲ್ಲರೂ ಉದ್ಯೋಗವಂತರಾಗಲು ವಿವಿಧ ಕಂಪನಿಗಳನ್ನು ಉದ್ಯೋಗ ಮೇಳದಲ್ಲಿ ಆಹ್ವಾನಿಸಿ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಯುವ ಜನರು ಇಂತಹ ಉದ್ಯೋಗ ಮೇಳಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ. ಡಿ.ಸಿ, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Like this:
Like Loading...
Related