ಚಾಮರಾಜನಗರ: ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯದಲ್ಲಿ
ಬಿಸಿಎಂ ಇಲಾಖೆ ತಂಡ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಬೀಗಿದೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಚಾಮರಾಜನಗರ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಸಿ.ಎನ್.ರೇಣುಕಾದೇವಿ ತಂಡದ ನಾಯಕ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು ಅವರಿಗೆ ಟ್ರೋಫಿ ವಿತರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಖಜಾಂಚಿ ಶಿವಕುಮಾರಯ್ಯ, ಕಾರ್ಯಾಧ್ಯಕ್ಷ ಮಹಾದೇವಸ್ವಾಮಿ, ಕಾರ್ಯದರ್ಶಿ ಭರತ್ ಭೂಷಣ್, ರಾಜ್ಯ ಪರಿಷತ್ತು ಸದಸ್ಯ ನಟರಾಜು, ಹಿರಿಯ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ,ವೀರಭದ್ರಸ್ವಾಮಿ, ಭವಾನಿದೇವಿ, ಯೋಗಾಪ್ರಕಾಶ್, ಮಹೇಂದ್ರ ಹಾಗೂ
ತಂಡದ ಸದಸ್ಯರು ಹಾಜರಿದ್ದರು.