ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಜಿಲ್ಲಾ‌ ಮಟ್ಟದ ಕಾರ್ಯಕ್ರಮ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಚಾಮರಾಜನಗರ : ಜಿಲ್ಲಾ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಜಿಲ್ಲಾ ಮುನ್ನಡೆ ಕಾರ್ಯಕ್ರಮ ಆರಂಭಿಸುವ ಕುರಿತು ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರು,ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು.

ಕಾರ್ಯಕ್ರಮವನ್ನು ಪದವಿ ವಿದ್ಯಾರ್ಥಿಗಳು ಹಾಗೂ ಈಗಾಗಲೇ ವ್ಯಾಸಂಗ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸಹಕಾರಿಯಾಗುವಂತೆ ರೂಪಿಸುವ ಕುರಿತು ಸಮಾಲೋಚಿಸಲಾಯಿತು.

ಪದವಿ ಅವಧಿಯಲ್ಲಿಯೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತಿಳಿವಳಿಕೆ, ಮಾರ್ಗದರ್ಶನ ಮತ್ತು ಪರಿಚಯವನ್ನು ಮಾಡಿಕೊಟ್ಟು ಅವರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜುಗೊಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮವನ್ನು ಇಂಡಿಯಾ ಫೋರ್ ಐಎಎಸ್ ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮದ ಜಾರಿಗೆ ಸಂಬಂಧಿಸಿದ ರೂಪರೇಷೆ ಮತ್ತು ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಿಕೆ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಸಿ.ಎಸ್.ಆರ್ ಸಂಯೋಜಕರೊಂದಿಗೆ ಇಂಡಿಯಾ ಫೋರ್ ಐಎಎಸ್ ಸಂಸ್ಥೆಯ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *