ನ. 24ರಂದು ನಗರದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 

ಪಶುಸಂಗೋಪನೆ, ರೇಷ್ಮೆಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಗೌರವ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ) ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *