ಚಾಮರಾಜನಗರ, ನವೆಂಬರ್ 21 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮವನ್ನು ನವೆಂಬರ್ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೂತನ ಕೆ.ಡಿ.ಪಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಮೊದಲಿಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆ.ಹೆಚ್. ಮುನಿಯಪ್ಪ ಗೌರವ ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಘನ ಉಪಸ್ಥಿತಿ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ.ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ (ಮುನ್ನ) ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‍ರಾಜ್, ಆಯುಕ್ತರಾದ ಎನ್.ಎಂ. ನಾಗರಾಜ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಕಾರ್ಯದರ್ಶಿಗಳಾದ ಎಂ. ಶಿವರಾಮು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Related