ಪ್ರಹ್ಲಾದ್‌ಜೋಶಿ, ಕಂಗನಾ ರಣಾವತ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ: ಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರಹ್ಲಾದ್‌ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿರುವ ಕೇಂದ್ರ ಸರ್ಕಾರದ ಕ್ರಮ ಹಾಗೂ ಸಂಸದೆ ಕಂಗನಾ ರಣಾವತ್ ಮಹಿಳೆಯರು ಮತ್ತು ಜೆನ್-ಜೆಡ್ ಪ್ರತಿಭಟನಾಕಾರರ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸತ್ತಿರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಜಿಲ್ಲಾಧ್ಯಕ್ಷೆ ಎಸ್.ನಾಗರತ್ನ ಕೆಂಗಾಕಿ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ, ನೂತನ ಶಿಕ್ಷಣ ಸಚಿವ ಪ್ರಹ್ಲಾದ್‌ಜೋತಿ, ಸಂಸದೆ ಕಂಗನಾ ರಣಾವತ್ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪಂಚ ಗ್ಯಾರಂಟಿ ಯೋಜನೆಗಳ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರಹ್ಲಾದ್‌ಜೋಶಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿರುವ ಕೇಂದ್ರ ಸರ್ಕಾರದ ಕ್ರಮ ಹಾಗೂ ಸಂಸದೆ ಕಂಗನಾ ರಣಾವತ್
ಮಹಿಳೆಯರು ಮತ್ತು ಜೆನ್-ಜೆಡ್ ಪ್ರತಿಭಟನಾಕಾರರ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ದೇಶ, ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದ್ದು ಅದರಂತೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಾಗಿದೆ ಎಂದರು.

ನೀಟ್ ಪರೀಕ್ಷೆ ಪಶ್ನೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ಜಂತ‌ರ್ ಮಂತರ್‌ನಲ್ಲಿ ಮಾಡಿದ ಹೋರಾಟದಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರಧಾನ್ ರಾಜೀನಾಮೆ ಪಡೆದು ಪ್ರಹ್ಲಾದ್ ಜೋಶಿ ಅವರನ್ನು ಕೇಂದ್ರ ಶಿಕ್ಷಣ ಸಚಿವರಾಗಿ ನೇಮಕ ಮಾಡಿರುವುದು ಅತ್ಯಂತ ಖಂಡನೀಯವಾದದ್ದು ಪ್ರಹ್ಲಾದ್‌ಜೋಶಿ ಶಿಕ್ಷಣ ಸಚಿವರಾಗಲು ಸೂಕ್ತರಲ್ಲ. ಅವರು ಅತ್ಯಾಚಾರಿಗಳ ಪರವಾಗಿ ಮಾತನಾಡಿದ್ದರು. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ತತ್‌ಕ್ಷಣವೇ ಪಹ್ಲಾದ್‌ಜೋಶಿ ಅವರನ್ನು ಶಿಕ್ಷಣ ಸಚಿವ ಸ್ಥಾನದಿಂದ ಕೆಳಗಿಸಬೇಕು. ಅವರಿಂದ ರಾಜೀನಾಮೆ ಪಡೆಯಬೇಕು. ಅವರೇ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ನಿರಂತರವಾಗಿ ಕಾಂಗ್ರೆಸ್‌ ಹೋರಾಟ ಮಾಡುತ್ತದೆ ನೀಟ್ ಪರೀಕ್ಷೆ ಹಗರಣದಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕಿಲ್ಲ. ವಿದ್ಯಾರ್ಥಿಗಳ ಮೇಲೆ ಹೂಡಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ನೀಟ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿಕೊಡಬೇಕು. ಸಂಸದೆ ಕಂಗನಾ ರಣಾವತ್ ಮಹಿಳೆಯರು ಮತ್ತು ಜೆನ್–ಜೆಡ್ ಪ್ರತಿಭಟನಾಕಾರರ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದ್ದು ಅವರ ಸಂಸರಾಗಿ ಮುಂದುವರಿಯಲು ಯಾವುದೇ ಅರ್ಹತೆ ಇಲ್ಲ
ಕೂಡಲೇ ರಾಜೀನಾಮೆ ನೀಡಬೇಕು. ಜಂತರ್ ಮಂತರ್ ಹೋರಾಟಕ್ಕೆ ಕೇಂದ್ರ ಸರ್ಕಾರ
ಕಾರಣರಾಗಿರುವ ಹಿನ್ನಲೆಯಲ್ಲಿ ನರೇಂದ್ರಮೋದಿ, ಅಮಿತ್‌ ಷಾ ಕೂಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ  ಎಸ್.ನಾಗರತ್ನ ಕೆಂಗಾಕಿ, ರಾಜ್ಯ ಕಾರ್ಯದರ್ಶಿ ಲತಾಜತ್ತಿ, ಗ್ರಾಮಾಂತರ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಕೃಷ್ಣಮೂರ್ತಿ, ಮಹದೇವಯ್ಯ,ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ,  ಬ್ಲಾಕ್ ಅಧ್ಯಕ್ಷರಾದ  ನಾಗಶ್ರೀ, ಭಾಗ್ಯ, ಶಕುಂತಲಾ, ಕಾರ್ಯದರ್ಶಿ ಕೃಷ್ಣವೇಣಿ, ಪುಟ್ಟಮ್ಮ, ಕೇತಮ್ಮ, ಪದ್ಮಪುರಷೋತ್ತಮ,  ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *