
ಸಾಗಡೆ ಗ್ರಾ.ಪಂ. ಅಧ್ಯಕ್ಷೆಗೆ ಒಲಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಸಾಗಡೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಎಸ್. ನಾಗÀರತ್ನ ಕೆಂಗಾಕಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಎಸ್. ನಾಗರತ್ನ ಕೆಂಗಾಕಿ ಅದ ನಿಮ್ಮನ್ನು ಆಯ್ಕೆ ಮಾಡಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜೊತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಿಂದ ಮಹಿಳೆಯರಿಗೆ ಆಗುತ್ತಿರುವ ಅನುಕೂಲ ಬಗ್ಗೆ ಜಾಗೃತಿ ಮೂಡಿಸಿ, ಜಿಲ್ಲೆಯಲ್ಲಿ ಮಹಿಳೆಯರನ್ನು ಕಾಂಗ್ರೆಸ್ ಪರವಾಗಿ ಸಂಘಟನೆ ಮಾಡಬೇಕೆಂದು ಅದೇಶ ಪ್ರತಿಯಲ್ಲಿ ಸೌಮ್ಯರೆಡ್ಡಿ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಕಾಂಗ್ರೆಸ್‍ನ ಮಹಿಳಾ ಘಟಕದ ಕಾರ್ಯದರ್ಶಿ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಸಾಗಡೆ ಗ್ರಾ.ಪಂ. ಅಧ್ಯಕ್ಷರಾಗಿದ್ದ ಎಸ್. ನಾಗರತ್ನಕೆಂಗಾಕಿ ಅವರನ್ನು ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷರನ್ನಾಗಿ ಜಿಲ್ಲೆಯ ಶಾಸಕರು, ಸಂಸದರು ಹಾಗೂ ಜಿಲ್ಲಾಧ್ಯಕ್ಷರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಿದ್ದಾರೆ. .
ಅಭಿನಂದನೆ : ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲು ಕಾರಣಕರ್ತರಾದ ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾದ ಎಚ್.ಎಂ. ಗಣೇಶ್‍ಪ್ರಸಾದ್, ಚಾ.ನಗರ ಕ್ಷೇತ್ರದ ಶಾಸಕರಾದ ಸಿ. ಪುಟ್ಟರಂಗಶೆಟ್ಟರು, ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಸಂಸದರಾದ ಸುನೀಲ್ ಬೋಸ್, ಮಾಜಿ ಶಾಸಕರಾದ ಆರ್. ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಮರಿಸ್ವಾಮಿ ಮತ್ತು ಜಿಲ್ಲೆಯ ಎಲ್ಲಾ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಮಂಚೂಣಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರಿಗೆ ಅಭಾರಿಯಾಗಿದ್ದೇನೆ. ಎಲ್ಲರ ಮಾರ್ಗದರ್ಶನ, ಸಲಹೆ, ಸಹಕಾರದೊಂದಿಗೆ ಮಹಿಳಾ ಕಾಂಗ್ರೆಸ್ ಘಟಕವನ್ನು ಬಲಪಡಿಸಲು ಶ್ರಮಿಸಲಿದ್ದು, ಮಹಿಳಾ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗು ಕಾರ್ಯಕರ್ತರಿಗೆ ಹೃದಯ ಪೂರ್ವ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಎಸ್. ನಾಗರತ್ನ ಕೆಂಗಾಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.