ಡಿ.ಕೆ.ಶಿವಕುಮಾರ್ ಜನ್ಮದಿನ ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ

  • ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

ಚಾಮರಾಜನಗರ : ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು.
ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ದಿಲೀಪ್ ಕುದರ್, ತಾಲೂಕು ಅಧ್ಯಕ್ಷ ಸಿದ್ದರಾಜು ದೊಡ್ಡರಾಯಪೇಟೆ ಅವರ ನೇತೃತ್ವದಲ್ಲಿ  ಡಿ.ಕೆ.ಶಿವಕುಮಾರ್ ಅವರ ಹೆಸರಿನಲ್ಲಿ ಶ್ರೀಚಾಮರಾಜೇಶ್ವರಸ್ವಾಮಿಗೆ ಆರ್ಚನೆ ಮಾಡಿಸಿ ವಿಶೇಷಪೂಜೆ ಸಲ್ಲಿಸಲಾಯಿತು.
ನಂತರ ದೇವಸ್ಥಾನ ಹೊರಗಡೆ ಬಂದ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ದಿಲೀಪ್ ಕುದರ್, ತಾಲೂಕು ಅಧ್ಯಕ್ಷ ಸಿದ್ದರಾಜು ಮಾತನಾಡಿ, ರಾಜ್ಯ ಉಪಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರಣಿಸಿ ಮುಂದಿನ ಮುಖ್ಯಮಂತ್ರಿ ಯಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು.
ವೃದ್ದರಿಗೆ ಊಟ ವ್ಯವಸ್ಥೆ: ನಂತರ ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ವೃದ್ದರಿಂದ ಕೇಕ್ ಕತ್ತರಿಸಿ ಊಟ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಲೋಹಿತ್ ಅಪ್ಪು, ಉಮಾಪತಿ, ಜಗದೀಶ್ ಉತ್ತುವಳ್ಳಿ, ಗೋವಿಂದ ಗೌಡ,  ನಲ್ಲೂರು,  ಹರೀಶ್, ಮಂಜು, ಮನೋಜ್, ನಾಗರಾಜು,ರಮೇಶ್
ಆನಂತ್ ಕುಮಾರ್, ಶಶಿಕಲಾ, ಮಂಜು, ಮಣಿಕಂಠ ಮಾಸ್ಟರ್ಸ, ಸುನೀಲ್, ಮನೋಜ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *