ರಾಜ್‌ಕುಮಾರ್ ಜಯಂತಿ ಅಂಗವಾಗಿ ದೊಡ್ಮನೆ ಗೀತೆ ಗಾಯನ: ಮೈಸೂರು ಜಯರಾಂ

ಚಾಮರಾಜನಗರ: ಡಾ.ರಾಜ್ ಕುಮಾರ್ ಅವರ 98ನೇ ಜಯಂತಿ ಹಾಗೂ ಡಾ.ಪಾರ್ವತಮ್ಮ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಡಾ.ರಾಜ್ ಕುಮಾರ್ ಮ್ಯೂಸಿಕಲ್ ಗ್ರೂಪ್ ಮೈಸೂರು ವತಿಯಿಂದ ಮೇ.31 ರಂದು ನಗರದಲ್ಲಿ ದೊಡ್ಮನೆ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು  ಮ್ಯೂಸಿಕಲ್ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಮೈಸೂರು ಜಯರಾಂ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗುವ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹೆಚ್.ಹೆಚ್.ನಾಗರಾಜು, ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಲಿಂಗರಾಜು, ಈಶ್ವರಿ ಸೋಶಿಯಲ್ ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್,ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾ.ಗು.ನಾಗರಾಜು, ಅರುಂಧತಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಶಿವಕುಮಾರ್ ರಾಮಸಮುದ್ರ, ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ  ಡಾ.ರಾಜ್ ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡುವಂತೆ ಜಯರಾಂ ಮನವಿ ಮಾಡಿದರು.
     ಪತ್ರಿಕಾಗೋಷ್ಠಿಯಲ್ಲಿ ಅರುಂಧತಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಾಹಕ ಶಿವಕುಮಾರ್ ರಾಮಸಮುದ್ರ, ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ಟಿವಿಎಸ್ ಕುಮಾರ್, ದೊರೆರಾಜು ಆಲೂರು, ನಾಗೇಂದ್ರ ಯಳಂದೂರು, ಲಿಂಗರಾಜು, ಹಾಜರಿದ್ದರು.

Leave a Reply

Your email address will not be published. Required fields are marked *