- ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಕರ್ನಾಟಕ ಪಬ್ಲಿಕ್ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ Ro ಘಟಕ ಹಾಗೂ ಊಟದ ತಟ್ಟೆ ವಿತರಣೆ
ಚಾಮರಾಜನಗರ; ಸರ್ಕಾರಿ ಶಾಲೆಗಳ ಬೆಳವಣಿಗೆಗೆ ದಾನಿಗಳ ನೆರವು ಅಗತ್ಯ ವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ 240 ಹೆಣ್ಣು ಮಕ್ಕಳಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ದಾನಿಗಳಾದ ರೈತ ಮುಖಂಡ ಕೆಂಡಗಣ್ಣಸ್ವಾಮಿ. ಜೆಎಸ್ಎಸ್ ದoತ್ತ ಕಾಲೇಜಿನ ಡಾ. ಸಿ.ಪಿ. ಕಾತ್ಯಾಯಿಣಿ.. ಮೈಸೂರು. ಟಿ ವಿ ಗೋಪಿನಾಥ್ . ಇವರುಗಳ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಿಸಿ ಮಾತನಾಡಿದರು.
ಪರಿಸರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶಾಲಾಆವರಣದಲ್ಲಿ ಸಸಿ ನೆಡಲು ಬಂದಂತಹ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಶಾಲೆಗೆ ಶುದ್ದ ಕುಡಿಯುವ ನೀರು, ತಟ್ಟೆ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದರು ಅದರಂತೆ ದಾನಿಗಳ ನೆರವಿನಿಂದ ಈ ಶಾಲೆಗೆ ಹಿಂದೆಯೇ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇಂದು ಶಾಲೆ ಎಲ್ಲ ವಿದ್ಯಾರ್ಥಿಗಳಿಗೂ ಊಟದ ತಟ್ಟೆ ವಿತರಿಸಲಾಗಿದೆ.
ಸರ್ಕಾರದ ಸವಲತ್ತುಗಳೊಂದಿಗೆ ದಾನಿಗಳು ನೆರವು ನೀಡಿದರೆ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಕರು ಮಕ್ಕಳಿಗೆ ಚೆನ್ನಾಗಿ ಪಾಠಪ್ರವಚನ ಹೇಳಿಕೊಡುವ ಜೊತೆಗೆ ಶಾಲೆಯ ಅಭಿವೃದ್ಧಿಗೆ ಬೇಕಾದ ವಸ್ತುಗಳನ್ನು ದಾನಿಗಳಿಂದ ಪಡೆದುಕೊಳ್ಳುವುದು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರತಿಭೆಗೆ ತಕ್ಕ ಪ್ರೋತ್ಸಾಹ ನೀಡಿದರೆ ಮುಂದಿನ ದಿನಗಳಲ್ಲಿ ನಿಮ್ಮ ವಿದ್ಯಾರ್ಥಿಗಳು ಶಾಶ್ವತವಾಗಿ ಗುರುಗಳ ನೆನೆದುಕೊಳ್ಳುತ್ತಾರೆ ಎಂದರು.
ಪ್ರಗತಿಪರ ರೈತ ಕೆಂಡಗಣ್ಣುಸ್ವಾಮಿ, ರವರ ಹುಟ್ಟುಹಬ್ಬದ ನೆನಪಿಗಾಗಿ ಮಕ್ಕಳಿಗೆ ಊಟದ ತಟ್ಟೆ ವಿತರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಕಳ್ಳಿ ಮಹಾದೇವಸ್ವಾಮಿ, ತಾಲೂಕು ಅಧ್ಯಕ್ಷ ನಂಜನಪುರ ಸತೀಶ್, ಉಪಾಧ್ಯಕ್ಷ ಹೆಗ್ಗೋಠಾರ ಶಿವಸ್ವಾಮಿ, ಕಾರ್ಯದರ್ಶಿ ಉಡಿಗಾಲ ಸುಂದ್ರಪ್ಪ, ಉಪ ಪ್ರಾಂಶುಪಾಲ ಶೀಲಾರಾಣಿ
ಶಿಕ್ಷಕಿ ಗೌರಮ್ಮ ಶಿಕ್ಷಕರು, ಮಕ್ಕಳು ಹಾಜರಿದ್ದರು.
