ಚಾಮರಾಜನಗರ : ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ.ರೇಣುಕಾದೇವಿ ಹೇಳಿದರು.
ನಗರದ ನ್ಯಾಯಾಲಯದ ರಸ್ತೆ ಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
1891ರ ಏ. 14 ರಂದು ಜನಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಲ್ಲಿಯೇ ತಾನು ಅನುಭವಿಸಿದ ನೋವು, ಯಾತನೆಗಳನ್ನು ಮುಂದಿನ ಪೀಳಿಗೆ ಅನುಭವಿಸಬಾರದು ನಿರಂತರವಾಗಿ ಅಧ್ಯಯನ ಮಾಡಿ ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ ಪ್ರತಿಯೊಬ್ಬರಿಗೆ ನ್ಯಾಯ ಮಂಡನೆ ಮಾಡಿದರು. ಜೀವನ ಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಅವರು ಡಿ. 6, 1956 ರಂದು ದೇಹತ್ಯಾಗ ಮಾಡಿದರು. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ
ಖಜಾಂಚಿ ಶಿವಕುಮಾರಯ್ಯ ಕಾರ್ಯಾಧ್ಯಕ್ಷ ಮಹದೇವಸ್ವಾಮಿ ಗೌರವ ಅಧ್ಯಕ್ಷ ಮಹದೇವಯ್ಯ, ಹಿರಿಯ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಘ ಪದಾಧಿಕಾರಿಗಳಾದ ನಂಜುಂಡ, ಮಹೇಂದ್ರ, ನಾರಾಯಣ, ಸೋಮಶೇಖರ್. ರವಿ, ವೇಲುಕುಮಾರ್, ರಾಹುಲ್, ಸಿ.ಎಂ.ಮರುಗೇಶ್ ಕುಮಾರ್, ಎನ್.ಜಿ.ರಾಜು, ಶಿವಮೂರ್ತಿ, ಸಿ.ಕೆ.ವಾಸು. ಪುಟ್ಟಸ್ವಾಮಿ, ನಂಜುಂಡಸ್ವಾಮಿ, ಸುಬ್ರಹ್ಮಣ್ಯ ಹಾಜರಿದ್ದರು.