ಡಾ.ಬಾಬು ಜಗಜೀವನರಾಮ್ ಸಂಘಟನೆಗಳ ಒಕ್ಕೂಟದಿಂದ ಅಂಬೇಡ್ಕರ್ ಜಯಂತಿ ಆಚರಣೆ

 ಚಾಮರಾಜನಗರ:  ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಯನ್ನು ಆಚರಿಸಲಾಯಿತು.
   ನಗರದ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ
ಜಿಲ್ಲಾಧ್ಯಕ್ಷ ಹೆಚ್.ಹೆಚ್.ನಾಗರಾಜು ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಲ್ಲೇ ತುಂಬಾ ಕಷ್ಟದಿಂದ ವಿದ್ಯಾಭ್ಯಾಸ ಮಾಡಿದರು. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಪಾರ ವಿದ್ವತ್ ಹೊಂದಿ ವಿವಿಧ ದೇಶಗಳ ಸಂವಿಧಾನ ಅಧ್ಯಯನ ಮಾಡಿ ದೇಶಕ್ಕೆ ಉತ್ಕೃಷ್ಟ ವಾದ ಸಂವಿಧಾನ ಬರೆದು ಕೊಡುವ ಮೂಲಕ ಸರ್ವರಿಗೂ ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಗೌರವಾಧ್ಯಕ್ಷ ಬಸವನಪುರ ರಾಜಶೇಖರ ಪುಷ್ಷಾರ್ಚನೆ ಮಾಡಿ ಮಾತನಾಡಿ,  ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ಮೂಲಭೂತ ಹಕ್ಕುಗಳು ಮತ್ತು ದುರ್ಬಲ ವರ್ಗದವರಿಗೆ ಮೀಸಲಾತಿಯನ್ನು ಕಲ್ಪಿಸಿದರು. ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹೋರಾಡಿದರು ಎಂದರು.
ರಾಮಸಮುದ್ರ ಶಿವಣ್ಣ ಮಾತನಾಡಿ, ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನ ಹಕ್ಕು ಮತ್ತು ಸಮಾನತೆಗಾಗಿ ಹೋರಾಡಿದರು ಎಂದರು.
   ಕಾರ್ಯಕ್ರಮದಲ್ಲಿ   ಒಕ್ಕೂಟದ ಉಪಾಧ್ಯಕ್ಷ ಚನ್ನಬಸಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಸಹ ಕಾರ್ಯದರ್ಶಿ ಶಿವಕುಮಾರ್, ನಿವೃತ್ತ ಶಿಕ್ಷಕ ಚಿಕ್ಕಮಾದಯ್ಯ, ಗ್ರಾ.ಪಂ.ಮಾಜಿ ಅಧ್ಯಕ್ಷ ಮಹದೇವಯ್ಯ,ನಗರಸಭಾ ಮಾಜಿ ಸದಸ್ಯ ಶಿವಣ್ಣ,ಮುಖಂಡರಾದ  ಬಂಗಾರನಾಯಕ, ಪಣ್ಯದಹುಂಡಿ ರಾಜು, ಲಿಂಗರಾಜು, ಡ್ರೈವರ್ ಮಹದೇವಯ್ಯ, ಕರಿನಂಜನಪುರ ಸಿದ್ದರಾಜು, ಕೃಷ್ಣಪ್ಪ,
ಸುಂದರ್, ಶಿವಕುಮಾರ್ ವೆಲ್ಡಿಂಗ್ ಲಿಂಗರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *